'ವಿದ್ಯಾರ್ಥಿಗಳು ಉತ್ತಮ ಹವ್ಯಾಸ ರೂಢಿಸಿಕೊಳ್ಳಿ'
ಶಿಡ್ಲಘಟ್ಟ: ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೆಕೆಂದು ಅಂಚೆ ಚೀಟಿ ಸಂಗ್ರಾಹಕ ರಾಷ್ಟ್ರಪ್ರಶಸ್ತಿ ವಿಜೇತ ಎಂ.ಆರ್. ಪ್ರಭಾಕರ್ ಹೇಳಿದರು.
ತಾಲೂಕಿನ ಹನುಮಂತಪುರ ಗೇಟ್ನಲ್ಲಿರುವ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಕಾರ್ಯಕ್ರಮದಲ್ಲಿ ಅಂಚೆ ಚೀಟಿಗಳನ್ನು ಪ್ರದರ್ಶಿಸಿ ಮಾತನಾಡಿದ ಅವರು, ನಾಣ್ಯಗಳು ಹಾಗೂ ಅಂಚೆ ಚೀಟಿಗಳ ಸಂಗ್ರಹಣೆಯಿಂದಾಗಿ ಗತಕಾಲದ ಇತಿಹಾಸ ನೆನೆಪಾಗುತ್ತದೆ ಎಂದರು. ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಮಾತನಾಡಿ, ನಾಡು ನುಡಿ, ಸಂಸ್ಕೃತಿಯನ್ನು ಮರೆಯಬಾರದು ಎಂದರು. ಪ್ರಾಂಶುಪಾಲ ಮಹದೇವ್ ಮಾತನಾಡಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿಯೂ ಸೇರಿದಂತೆ ಮಕ್ಕಳು ಪೋಷಕರು ಹಾಜರಿದ್ದರು.