ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು

Rashmi Kasaragodu
Updated On : 3 Oct 2013, 1:00 am

ಬಂಗಾರಪೇಟೆ: ವ್ಯಕ್ತಿಯನ್ನು ಶಕ್ತಿಯಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದು ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ಸರಸ್ವತಿ ವಿದ್ಯಾನಿಕೇತನ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ದಲಿತ ನೌಕರರ ಒಕ್ಕೂಟಗಾಂಧಿ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ದೇಶದ ಪ್ರಗತಿಗೆ ಶಿಕ್ಷಣ ಅಗತ್ಯ. ಶಿಕ್ಷಕರಿಗೆ ಸಿಗುವ ಗೌರವ ಮತ್ತೊಬ್ಬರಿಗೆ ಇಲ್ಲ. ಆದ್ದರಿಂದ ಮಕ್ಕಳನ್ನು ಪ್ರಾಥಮಿಕ ಹಂತದಲ್ಲೆ ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದರು.
ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾನ್ ವ್ಯಕ್ತಿ. ಇಂತಹ ವ್ಯಕ್ತಿಯನ್ನು ಪ್ರಪಂಚದ ಎಲ್ಲೆಡೆ ಆರಾದಿಸುವರು ಗಾಂಧಿಜಿ ತಮ್ಮ ಬದುಕಲ್ಲಿ ಹಲವು ಸಿದ್ದಾಂತಗಳನ್ನು ಅನುಸರಿಸಿಕೊಂಡು ಬಂದರಿಂದ ಅವರು ಮಹಾನ್ ವ್ಯಕ್ತಿಯಾದರು ಎಂದರು. ತಾಲೂಕು ಕಸಾಪ ಅಧ್ಯಕ್ಷ ಆರ್. ಅಶ್ವಥ್ ಮಾತನಾಡಿದರು. ಇದೇ ವೇಳೆ ಹಲವು ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪ, ಬಿಇಒ ಕೆ. ಜಯರಾಜ್, ಕೆ. ಚಂದ್ರಾರೆಡ್ಡಿ, ಡಿ. ಚಿಕ್ಕಣ್ಣ, ಕೆ.ಬಿ. ಮೋಹನ್, ಚಂದ್ರಶೇಖರಗೌಡ, ನಾಗರಾಜ್, ಶ್ರೀನಾಥ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement