ಆರೋಗ್ಯ ಉಚಿತ ತಪಾಸಣೆ ಶಿಬಿರ
ಕೆಜಿಎಫ್: ವಿಶ್ವ ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ಕೆಜಿಎಫ್ ನಗರಸಭೆ ಸಭಾಂಗಣದಲ್ಲಿ ಪೌರಾಯುಕ್ತ ವಿ. ಬಾಲಚಂದ್ರ ಅವರ ನೇತೃತ್ವದಲ್ಲಿ ಕೆಜಿಎಫ್ ನಗರದ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. ನಗರದ ಸಾರ್ವಜನಿಕ ಆಸ್ಪತ್ರೆಯ ವೈದ್ಯರಿಂದ ವಿವಿಧ ರೋಗಗಳನ್ನು ಪರೀಕ್ಷಿಸಿ ಚಿಕಿತ್ಸೆ ನೀಡಿದರು. ಈ ವೇಳೆ ಪೌರಾಯುಕ್ತ ವಿ. ಬಾಲಚಂದ್ರ, ವ್ಯವಸ್ಥಾಪಕ ನಂಜುಂಡಸ್ವಾಮಿ, ಹಿರಿಯ ಆರೋಗ್ಯಾಧಿಕಾರಿ ಸರಸ್ವತಿ, ಅಖಿಲಾಬಾನು, ಹರಿನಾಥ್, ಕಾರ್ಯಪಾಲಕ ಅಭಿಯಂತರ ಶ್ರೀಧರ್ ಹಾಜರಿದ್ದರು.