ಸರ್ಕಾರಿ ಶಾಲೆಗಳ ಚಿತ್ರಣ ಬದಲಾಗಬೇಕು
ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳ ಚಿತ್ರಣ ಬದಲಾಗಬೇಕಾದ ಜತೆಗೆ ಮಕ್ಕಳ ಸಂಖ್ಯೆಯೂ ದ್ವಿಗುಣಗೊಳ್ಳಬೇಕು. ಇದನ್ನು ಸಾಕಾರಗೊಳಿಸಬೇಕಾದ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಡಾ.ಕೆ. ಸುಧಾಕರ್ ತಿಳಿಸಿದರು.
ತಾಲೂಕಿನ ಮಾರಾಗಾನಹಳ್ಳಿಯಲ್ಲಿ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ಸಮುದಾಯ ಬಾಳ್ವೆ ಶಿಬಿರದ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳನ್ನು ತಿದ್ದುವ ಶಿಕ್ಷಕರು ನಿರಂತರ ಅಧ್ಯಯನದಿಂದ ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಬೇಕು. ತಂತ್ರಜ್ಞಾನ ಸದುಪಯೋಗಪಡಿಸಿಕೊಂಡು ವಿಶೇಷ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರೀಜೀ ಅವರನ್ನು ಸ್ಮರಿಸಿದರು. ಕಾಲೇಜಿನ ಪ್ರಾಂಶುಪಾಲ ಕೋಡಿರಂಗಪ್ಪ, ತಾಪಂ ಅಧ್ಯಕ್ಷ ಕೃಷ್ಣಮೂರ್ತಿ, ಸದಸ್ಯ ವೆಂಕಟನಾರಾಯಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ಪ್ರೊ. ಸುಧಾ, ರಾಜಣ್ಣ, ಶಿವಣ್ಣ ಇದ್ದರು.