ಬೇಡಿಕೆಗಳಿಗೆ ಆಗ್ರಹಿಸಿ ಶಾಸಕರಿಗೆ ಮುತ್ತಿಗೆ
ಚಿಂತಾಮಣಿ: ಪಟ್ಟಣದ ಬಾಲಕರ ಪ್ರಥಮ ದರ್ಜೆ ಕಾಲೇಜಿನ ಎಬಿವಿಪಿ ವಿದ್ಯಾರ್ಥಿಗಳು ಶಾಸಕ ಜೆ.ಕೆ. ಕೃಷ್ಣಾರೆಡ್ಡಿಯವರಿಗೆ ಮುತ್ತಿಗೆ ಹಾಕಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿದರು.
ಪಟ್ಟಣದ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಮೂಲ ಸೌಲಭ್ಯ ವಂಚಿತವಾಗಿದ್ದು, ಕುಡಿಯಲು ನೀರು, ಶೌಚಾಲಯ ಇಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರೂ ಪ್ರಾಂಶುಪಾಲರು, ಅಧಿಕಾರಿಗಳ ಕಾರ್ಯವೈಖರಿ ಖಂಡಿಸಿ ಶಾಸಕರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದಾಗ ನೂರಾರು ವಿದ್ಯಾರ್ಥಿಗಳು ಮುತ್ತಿಗೆ ಹಾಕಿ ಮನವಿ ನೀಡಿದರು.
ಕಾಲೇಜಿನಲ್ಲಿ ಸುಮಾರು 200 ಜನ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದು, ಇಲ್ಲಿ ಉಪನ್ಯಾಸಕರ ಕೊರತೆ ನೀಗಿಸುವಲ್ಲಿ ವಿಫಲಗೊಂಡಿರುವುದಾಗಿ ಮಂಜುನಾಥರೆಡ್ಡಿ, ಸುರೇಶ್, ಮಂಜು, ನವಾಜ್, ಸೈಯದ್, ವಿಜಯ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಆರೋಪಿಸಿದರು.