ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಸರಗಳವು
ಕೆಜಿಎಫ್: ರಾತ್ರಿ ವೇಳೆ ತನ್ನ ಮಗಳ ಜೊತೆ ಮನೆಗೆ ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಳ್ಳನೊಬ್ಬ ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ರಾಬರ್ಟ್ಸನ್ಪೇಟೆ ಠಾಣಾ ವ್ಯಾಪ್ತಿಯ ವಾಟರ್ ವರ್ಕ್ಸ್ ನಿವಾಸಿ ರವಿಕಿರಣ್ ಕಟ್ಟಿಮಣಿ ಎಂಬವರ ಪತ್ನಿ ವಿಮಲಾ ನಗರಸಭೆ ಕಚೇರಿ ಸಮೀಪ ರಾತ್ರಿ 8 ಗಂಟೆ ಸಮಯದಲ್ಲಿ ನಡೆದುಕೊಂಡು ಬರುತ್ತಿದ್ದಾಗ ಘಟನೆ ಸಂಭವಿಸಿದೆ. ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದಾರೆ. ಸುಲಿಗೆ ಪ್ರಕರಣ ದೂರು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.