ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಭೂ ಮಾಫಿಯಾ: ಸಿಒಡಿ ತನಿಖೆಗೆ ಆಗ್ರಹ

Mainashree
Updated On : 6 Oct 2013, 11:56 am

ಚಿಂತಾಮಣಿ: ಭೂ ಮಾಫಿಯಾಗೆ ಕಡಿವಾಣ ಹಾಕಲು ಪೊಲೀಸ್ ಅಧಿಕಾರಿಗಳು ವಿಫಲಗೊಂಡಿದ್ದು, ಪ್ರಕರಣವನ್ನು ಸಿಓಡಿ ತನಿಖೆಗೆ ಒಪ್ಪಿಸಬೇಕೆಂದು ಮಾದಿಗ ದಂಡೋರ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಪಿ.ವಿ. ವೆಂಕಟರವಣಪ್ಪ ಮತ್ತು ಜಂಗಮಶೀಗೇನಗಳ್ಳಿ ದೇವರಾಜ್ ಒತ್ತಾಯಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಭೂ ಮಾಫಿಯಾ ಘಟನೆಗಳಲ್ಲಿ ಹಲವು ಕಂದಾಯ ಇಲಾಖೆ ಅಧಿಕಾರಿಗಳು ಶಾಮೀಲಾಗಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಮತ್ತು ನಿವೇಶನಗಳನ್ನು ಕಬಳಿಸಿರುವ ಬಗ್ಗೆ ಖುದ್ದು ತಾಲೂಕು ದಂಡಾಧಿಕಾರಿಗಳೇ 15 ಪ್ರಕರಣಗಳಿಗೆ ಸಂಬಂಧಿಸಿ 30 ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ದೂರು ನೀಡಿದ್ದರೂ ಸ್ಥಳೀಯ ಪೊಲೀಸರು ಕ್ರಮ ಕೌಗೊಳ್ಳದಿರುವ ಬಗ್ಗೆ ಅಸಮದಾನ ವ್ಯಕ್ತಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳನ್ನು ಬಂಧಿಸಿ, ಇದಕ್ಕೆ ಸೂತ್ರದಾರಿಗಳನ್ನು ಪತ್ತೆ ಹಚ್ಚಿ ನ್ಯಾಯ ದೊರಕಿಸಿಕೊಡಲು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement