ಚಿಕ್ಕತಿರುಪತಿಯಲ್ಲಿ ಎನ್ನೆಸ್ಸೆಸ್ ಶಿಬಿರ
ಮಾಲೂರು: ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜತೆಯಲ್ಲಿ ಪಠ್ಯತೇರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಭವಿಷ್ಯದಲ್ಲಿ ಪರಿಪೂರ್ಣ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದು ಪ್ರಾಂಶುಪಾಲ ಕೆ. ವೆಂಕಟೇಶಪ್ಪ ಹೇಳಿದರು.
ತಾಲೂಕಿನ ಚಿಕ್ಕತಿರುಪತಿ ಗ್ರಾಮದಲ್ಲಿ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕವು ಹಮ್ಮಿಕೊಂಡಿದ್ದ 7 ದಿನಗಳ ವಿಶೇಷ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳಲ್ಲಿ ಭಾಗವಹಿಸುವುದು ಮುಖ್ಯವಾಗಿದ್ದು, ಸೇವಾ ಮನೋಭಾವ ಹಾಗೂ ನಾಯಕತ್ವ ಗುಣಗಳನ್ನು ಪಡೆಯಬಹುದು ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಜುಳಾ ವೆಂಕಟೇಶ್ ಶಿಬಿರ ಉದ್ಘಾಟಿಸಿದರು. ಚಿಕ್ಕತಿರುಪತಿ ಪಂಚಾಯ್ತಿ ಅಧ್ಯಕ್ಷೆ ಶೈಲಜಾ ಬಾಲಕೃಷ್ಣ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಅಶ್ವಥ್ನಾರಾಯಣ್ಗೌಡ, ಶಿಬಿರಾಧಿಕಾರಿ ವೆಂಕಟೇಶ್, ತೇನೆಗಾರ್ ಇದ್ದರು.