ನಗರಸಭೆ ಕಚೇರಿಯಲ್ಲಿ ಹಿರಿಯರಿಗೆ ಸನ್ಮಾನ
ಕೆಜಿಎಫ್: ನಗರಸಭೆ ಕಚೇರಿಯಲ್ಲಿ ಹಿರಿಯ ನಾಗರಿಕರು ಹಾಗೂ ಉತ್ತಮ ಸಮಾಜ ಸೇವೆ ಸಲ್ಲಿಸಿದ ಹಿರಿಯರಿಗೆ ಪೌರಾಯುಕ್ತ ವಿ.ಬಾಲಚಂದ್ರ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಾಜ್ಯದ ಎಲ್ಲ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಹಿರಿಯ ಸಮಾಜ ಸೇವಕರನ್ನು ಹಾಗೂ ಹಿರಿಯ ನಾಗರಿಕರನ್ನು ಸನ್ಮಾನಿಸಲು ಸರ್ಕಾರ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪೌರಾಯುಕ್ತ ವಿ.ಬಾಲಚಂದ್ರ ತಿಳಿಸಿದರು.