ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನಾನೂ ಟಿಕೆಟ್ ಆಕಾಂಕ್ಷಿ: ಎಂ.ನಾರಾಯಣಸ್ವಾಮಿ ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬದ್ಧ

Rashmi Kasaragodu
Updated On : 8 Oct 2013, 1:07 am

ಕನ್ನಡಪ್ರಭ ವಾರ್ತೆ, ಕೋಲಾರ,ಅ.7
ಮುಂಬರುವ ಲೋಕಸಭಾ ಚುನಾವಣೆಗೆ ಕೋಲಾರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ನಾನೊಬ್ಬ ಪ್ರಬಲ ಆಕಾಂಕ್ಷಿಯಾಗಿದ್ದಾನೆಂದು ಬಿಜೆಪಿಯ ಮುಖಂಡ, ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಮುಖಂಡರು ಈ ಹಿಂದೆಯೇ ನನಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರೆ, ಅವಕಾಶ ನೀಡಿದಲ್ಲಿ ಎಲ್ಲರನ್ನು ಒಗ್ಗೂಡಿಸಿ ಹೋರಾಟ ನೀಡುತ್ತೇನೆ.
  ಒಂದು ವೇಳೆ ಟಿಕೆಟ್ ಸಿಗದಿದ್ದರೂ ಅಧಿಕೃತ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುವೆ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯಲ್ಲಿ ಟಿಕೆಟಟ್ಸಿಗದಿದ್ದರೆ ಜೆಡಿಎಸ್ನಿಂದ ಅವಕಾಶ ಕೇಳುವಿರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಾಂತರ ಮಾಡುವುದರಿಂದ ಜನತೆಯ ವಿಶ್ವಾಸ ಕಳೆದುಕೊಳ್ಳಬೇಕಾಗುತ್ತದೆ. ಈ ಹಿಂದೆ ಕಾಂಗ್ರೆಸ್ ಬಿಡುವುದಕ್ಕೆ ಅನೇಕ ಕಾರಣಗಳು ಇತ್ತು. ಬಿಜೆಪಿ ಬಿಟ್ಟು ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲವೆಂದು ತಿಳಿಸಿದರು.
ಈ ಹಿಂದೆ ಜೆಡಿಎಸ್ ನಾಯಕರು ಕರೆದಾಗ ಹೋಗಿದ್ದರೆ ಚೆನ್ನಾಗಿರುತ್ತಿತ್ತು. ನಾನು ಮೂಲತಃ ಜನತಾ ಪರಿವಾರದವನು.
ರಾಮಕೃಷ್ಣ ಹೆಗಡೆ, ಜೆ.ಹೆಚ್. ಪಟೇಲ್ ಹಾಗೂ ಸಿ. ಬೈರೇಗೌಡರ ಗರಡಿಯಲ್ಲಿ ಬೆಳೆದಿದ್ದೇನೆ. ಹಾಗಂತ ಈಗ ಪಕ್ಷಾಂತರ ಮಾಡುವುದರಲ್ಲಿ ಅರ್ಥವಿಲ್ಲವೆಂದು ಹೇಳಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement