ಪೆಟ್ಟಿಗೆ ಅಂಗಡಿ ತೆರವಿಗೆ ಆಗ್ರಹ
ಚಿಂತಾಮಣಿ: ಎಪಿಎಂಸಿ ಮಾರ್ಕೆಟ್ನಲ್ಲಿ ದಲ್ಲಾಳಿಯೊಬ್ಬ ಅಕ್ರಮವಾಗಿ ಇಟ್ಟಿದ್ದ ಪೆಟ್ಟಿಗೆ ಅಂಗಡಿಯನ್ನು ತೆರವುಗೊಳಿಸುವಂತೆ ಎಪಿಎಂಸಿ ಅಧಿಕಾರಿಗಳಿಗೆ ಹಾಗೂ ಆಡಳಿತ ಜನಪ್ರತಿನಿಧಿಗಳಿಗೆ ದೂರು ನೀಡಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲಗೊಂಡಿದ್ದಾರೆಂದು ನೂರಾರು ರೈತರು, ನಾಗರಿಕರು ಆರೋಪಿಸಿದ್ದಾರೆ. ಈ ಬಗ್ಗೆ ಹಲವು ದಿನಗಳ ಹಿಂದೆ ರೈತ ಸಂಘ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಎಪಿಎಂಸಿ ಅಧ್ಯಕ್ಷರನ್ನು ಭೇಟಿ ಮಾಡಿದಾಗ ಈ ವಿಷಯಕ್ಕೆ ಸಂಬಂಧಿಸಿ ಮಾಧ್ಯಮಗಳು ಪ್ರಶ್ನಿಸಿದಾಗ, ಎಪಿಎಂಸಿ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ವಿಫಲಗೊಂಡಿದ್ದಾರೆಂದು ಹೇಳಿದರು. ಅನಧಿಕೃತವಾಗಿ ಪೆಟ್ಟಿಗೆ ಅಂಗಡಿ ಇಟ್ಟಿರುವ ದಲ್ಲಾಳಿಗೆ ಹಲವು ಎಪಿಎಂಸಿ ಸದಸ್ಯರು ತೆರವುಗೊಳಿಸಲು ಹೇಳಿದಾಗ ಇಲ್ಲಿಯತನಕ ಅದು ಕಾರ್ಯರೂಪಕ್ಕೆ ಬಂದಿಲ್ಲವೆಂದು ತಿಳಿದು ಬಂದಿದೆ.
ವರದನಾಯಕನಹಳ್ಳಿ: ಎನ್ನೆಸ್ಸೆಸ್ ಶಿಬಿರ
ಶಿಡ್ಲಘಟ್ಟ: ಗ್ರಾಮೀಣ ಪ್ರದೇಶದ ಜನರಿಗೆ ಹಲವಾರು ಸಮಸ್ಯೆಗಳೂ ಬಾಧಿಸುತ್ತಿವೆ. ನಗರ ವಾತಾವರಣದಲ್ಲಿ ಬೆಳೆಯುವ ವಿದ್ಯಾರ್ಥಿಗಳು ನಮ್ಮ ಗ್ರಾಮ ಸಂಸ್ಕೃತಿಯನ್ನು ಅರಿತು ಅವರ ಕಷ್ಟ- ಸುಖಗಳಿಗೆ ಸ್ಪಂದಿಸುವಲ್ಲಿ ಶಿಬಿರವು ನೆರವಾಗಬೇಕು ಎಂದು ಶಾಸಕ ಎಂ. ರಾಜಣ್ಣ ತಿಳಿಸಿದರು.