ಮಾಲೂರು: ಸಾಂಬಾರ್ ಪಾತ್ರೆಗೆ ಬಿದ್ದಿದ್ದ ಮಗು ಸಾವು
ಮಾಲೂರು: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಬ್ಯಾಲಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.27ರಂದು ಅಡುಗೆ ಸಹಾಯಕಿ ನಿರ್ಲಕ್ಷ್ಯದಿಂದ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಗಾಯಗೊಂಡಿದ್ದ ಬಾಲಕ ಮನೋಜ್(3) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ತಾಲೂಕಿನ ಬ್ಯಾಲಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಸಹಾಯಕಿ ಮಂಜುಳ ತನ್ನ ಮಗ ಮನೋಜ್‌ನನ್ನು ಜೊತೆಯಲ್ಲಿ ಕರೆ ತಂದು ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದಿದ್ದರಿಂದ ಸುಟ್ಟ ಗಾಯಗಳಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಅಂಗವೈಕಲ್ಯದಿಂದ ಬಳಲುತ್ತಿರುವ ಪತಿಯಿಂದ ಸಂಸಾರ ನೊಗ ಹಿಡಿದಿರುವ ವಿದ್ಯಾವಂತೆ ಮಂಜುಳಾಗೆ ಇದ್ದ ಒಬ್ಬ ಗಂಡು ಮಗುವನ್ನೂ ಕಳೆದುಕೊಂಡಿದ್ದಾಳೆ.