ಅಹವಾಲು ಸ್ವೀಕಾರ
ಕೋಲಾರ: ರಾಜ್ಯದ ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ಅವರು ಅ.9 ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಸಾರ್ವಜನಿಕರ ದೂರುಗಳ ಸ್ವೀಕಾರ ಹಾಗೂ ದೂರುಗಳ ವಿಚಾರಣೆ ನಡೆಸಲಿದ್ದಾರೆ.
ಎಲ್ಲಾ ಇಲಾಖೆಗಳಲ್ಲಿ ಬಾಕಿ ಇರುವ ಲೋಕಾಯುಕ್ತ ಕಡತಗಳ ವಿವರಗಳೊಂದಿಗೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಖುದ್ದು ಹಾಜರಾಗಲು ಜಿಲ್ಲಾಧಿಕಾರಿ ಡಿ.ಕೆ. ರವಿ ತಿಳಿಸಿದ್ದಾರೆ.