ಜೂಜಾಟ: ಐವರ ಬಂಧನ
ಚಿಂತಾಮಣಿ: ಅಂದರ್ ಬಾಹರ್ ಜೂಜಿನಲ್ಲಿ ತೊಡಗಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿ 5 ಜನರನ್ನು ಬಂಧಿಸಿ ಅವರಿಂದ ಸಾವಿರಾರು ರು. ಹಣವನ್ನು ವಶಪಡಿಸಿಕೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಂದಾರ್ಲಹಳ್ಳಿಯಲ್ಲಿ ನಡೆದಿದೆ.
ಚಿಂತಾಮಣಿ ತಾಲೂಕಿನ ಬಂದಾರ್ಲಹಳ್ಳಿ ಗ್ರಾಮದ ಕೆರೆ ಅಂಗಳದಲ್ಲಿ ಮಂಗಳವಾರ ಸಂಜೆ ಅಂದರ್ ಬಾಹರ್ ಆಡುತ್ತಿದ್ದ ಆರೋಪಿಗಳಾದ ಕೇಶಿವ, ಮಂಜು, ಲೋಕೇಶ್ ಹಾಗೂ ಇತರರು ಸೇರಿದಂತೆ 5 ಜನರನ್ನು ಬಂಧಿಸಿ 10 ಸಾವಿರ ನಗದು ಹಣವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯ ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.