ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮೂಲ ಸೌಕರ್ಯಗಳಿಗೆ ಒತ್ತಾಯಿಸಿ ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ

Rashmi Kasaragodu
Updated On : 9 Oct 2013, 12:48 pm

ಕೋಲಾರ: ಮೂಲ ಸೌಕರ್ಯಗಳಿಗೆ ಒತ್ತಾಯಿಸಿ ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದ ಬಳಿಯಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕರ ಹಾಸ್ಟೆಲ್ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್‌ನಲ್ಲಿ ಕುಡಿಯುವ ನೀರು, ಶೌಚಾಲಯ, ಗುಣಮಟ್ಟದ ಆಹಾರ ಸೇರಿದಂತೆ ಯಾವುದೇ ಮೂಲ ಸೌಕರ್ಯಗಳು ಇಲ್ಲದಿರುವುದರಿಂದ ವಿದ್ಯಾರ್ಥಿಗಳು ನೆಮ್ಮದಿಯಿಂದ ವ್ಯಾಸಂಗ ಮಾಡಲಾಗುತ್ತಿಲ್ಲ ಎಂದು  ಪ್ರತಿಭಟನಾಕಾರರು ಆರೋಪಿಸಿದರು. ವಿದ್ಯಾರ್ಥಿ ಸಮಸ್ಯೆಗಳನ್ನು ಗಮನಿಸದ ವಾರ್ಡನ್ ತಿಂಗಳಿಗೊಮ್ಮೆ ಬರುತ್ತಿದ್ದು, ಅಡುಗೆ ಸಿಬ್ಬಂದಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ತಿಂಗಳಾನುಗಟ್ಟಲೆ ವಸತಿ ನಿಲಯಕ್ಕೆ ಬರದ ವಾರ್ಡನ್‌ರನ್ನು ಅಮಾನತು ಮಾಡಬೇಕು, ಮೂಲ  ಸೌಲಭ್ಯ ಕಲ್ಪಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಹೂಹಳ್ಳಿ ನಾಗರಾಜ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿನಾಯಕ, ಸಂಪತ್‌ಕುಮಾರ್, ಸುನೀಲ್, ಗೀರೀಶ್, ಕೃಷ್ಣ, ರಘು, ಸುಬ್ರಮಣಿ, ಮಂಜುನಾಥ್, ವಿನೋದ್‌ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement