ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Rashmi Kasaragodu
Updated On : 9 Oct 2013, 12:48 pm

ಬಾಗೇಪಲ್ಲಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ತಾಲೂಕು ಸಮಿತಿ ನೇತೃತ್ವದಲ್ಲಿ  ನ್ಯಾಷನಲ್ ಕಾಲೇಜ್ ಮುಂಭಾಗದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಬಂದ ನೂರಾರು ವಿದ್ಯಾರ್ಥಿಗಳು ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್‌ಎಫ್‌ಐ ತಾಲೂಕು ಸಮಿತಿಯ ಅಧ್ಯಕ್ಷ ಎಸ್. ರಾಜಶೇಖರ್, ರಾಜ್ಯದ 50 ರಷ್ಟು ವಿದ್ಯಾರ್ಥಿಗಳು ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ವಿ.ವಿ. ನಿಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಇದುವರೆಗೂ ಪಠ್ಯ ಪುಸ್ತಕಗಳನ್ನು ತಲುಪಿಸಿಲ್ಲ, ಮೌಲ್ಯಮಾಪನದಲ್ಲಿ ಲೋಪದೋಷಗಳು ಹಾಗೂ ಅಂಕಪಟ್ಟಿಗಳ ವಿಳಂಬದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಾರಿಗೆ ಸೌಲಭ್ಯ ಒದಗಿಸಬೇಕು, ಪದವಿ ಪೂರ್ವ ಶಿಕ್ಷಣ ಮಂಡಳಿಯಲ್ಲಿ ನಡೆಯುತ್ತಿರುವ ಹಲವಾರು ಲೋಪದೋಷಗಳನ್ನು ಸರಿಪಡಿಸಬೇಕು, 2013-14ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ತಕ್ಷಣ ಪಠ್ಯಪುಸ್ತಕಗಳನ್ನು ಒದಗಿಸಬೇಕು, ಈ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವುದು ಸೇರಿದಂತೆ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿದರು.
ಈ ಸಂಬಂಧ ತಹಸೀಲ್ದಾರ್ ಎಂ.ಎ. ಪಧ್ಮ ರವರಿಗೆ ಮನವಿ ಸಲ್ಲಿಸಿದರು. ಎಸ್‌ಎಫ್‌ಐನ ನರಸಿಂಹಮೂರ್ತಿ, ರಾಘವೇಂದ್ರ ರೆಡ್ಡಿ, ಅಭಿಲಾಷ್, ಅಜಯ್, ಶ್ರೀನಾಥ್, ನರೇಂದ್ರ, ನರಸಿಂಹಮೂರ್ತಿ, ವೇಣುಗೋಪಾಲ್, ನರೇಶ್, ನಾಗೇಶ್, ಕಾವ್ಯ, ಚೈತ್ರ, ಪ್ರೇಮ, ಅಂಜಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement