ಅಪಘಾತ; ವ್ಯಕ್ತಿ ಸಾವು
ಚಿಂತಾಮಣಿ: ಅಪರಿಚಿತ ವ್ಯಕ್ತಿಯೊಬ್ಬನಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೈವಾರ ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿದೆ. ಚಿಂತಾಮಣಿ-ಬೆಂಗಳೂರು ಮಾರ್ಗದ ಕೈವಾರ ಕ್ರಾಸ್ ಬಳಿ ಮಂಗಳವಾರ ರಾತ್ರಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವ ಅಪರಿಚಿತ ಪಾದಾಚಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸುಮಾರು 40 ವರ್ಷ ವಯಸ್ಸುಳ್ಳ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಗ್ರಾಮಾಂತರ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಘವೇಂದ್ರ ತಿಳಿಸಿದ್ದಾರೆ. ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.