ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಾಲುಬಾಯಿ ಜ್ವರ: ವಿಶೇಷ ಪ್ಯಾಕೇಜ್ಗೆ ಆಗ್ರಹ

Rashmi Kasaragodu
Updated On : 10 Oct 2013, 12:41 pm

ಕಪ್ರ ವಾರ್ತೆ   ಕೋಲಾರ   ಅ.9
ಬಯಲು ಸೀಮೆ ಪ್ರದೇಶಕ್ಕೆ ಸೇರಿದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯಲ್ಲಿ ಮಾತ್ರವಲ್ಲದೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ಜಾನುವಾರುಗಳು ಕಾಲುಬಾಯಿ ಜ್ವರದಿಂದ ಸತ್ತಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ರೋಗ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜಾನುವಾರಗಳಿಗೆ ಕಾಲುಬಾಯಿ ಜ್ವರ ಬಂದು ಸುಮಾರು 3 ರಿಂದ 4 ಸಾವಿರ ಜಾನುವಾರುಗಳು ಸತ್ತಿರುವುದರಿಂದ ಜೀವನ ನಡೆಸಲು ಕಷ್ಟಪಡುತ್ತಿರುವ ರೈತ ಕುಟುಂಬಗಳಿಗೆ ತಲಾ ರು. 25 ಸಾವಿರ ವಿಶೇಷ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಮೂರ್ಖತನದ ಹೇಳಿಕೆ: ರೈತರ ಸಂಕಟ ತಿಳಿಯದ ಪಶು ಸಂಗೋಪನಾ ಸಚಿವ ಜಯಚಂದ್ರ ಅವರು, ನೊಂದವರಿಗೆ ಸಾಂತ್ವಾನ ಹೇಳುವ ಬದಲು ಮೂರ್ಖತನದ ಹೇಳಿಕೆ ನೀಡುತ್ತಿದ್ದಾರೆಂದು ದೂರಿದರು.
ವಿಶೇಷ ಪ್ಯಾಕೇಜ್: ತಾವು ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಬರ ಪರಿಹಾರದಡಿ ಸತ್ತಿರುವ ರಾಸುಗಳ ಮಾಲೀಕರಿಗೆ ವಿಶೇಷ ಪ್ಯಾಕೇಜ್ ಅನುಷ್ಠಾನಕ್ಕೆ ತರಬೇಕೆಂದು ಮನವಿ ಸಲ್ಲಿಸುತ್ತಿದ್ದೇನೆ, ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಬೆಳಗಾವಿಯಲ್ಲಿ ನಡೆಯುವ ರೈತ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದರು. ಜಾನುವಾರುಗಳನ್ನು ಕಳೆದುಕೊಂಡಿರುವ ರೈತರಿಗೆ ಹೆಚ್ಚಿನ ಪರಿಹಾರ ನೀಡಲು ಶಕ್ತಿ ಹೊಂದಿಲ್ಲ, ಹಾಗಾಗಿ ಕೇಂದ್ರ ಸರ್ಕಾರದಿಂದ ಬರ ಪರಿಹಾರಕ್ಕೆ ಹೆಚ್ಚಿನ ಅನುದಾನ ಪಡೆದು ಅದರಲ್ಲಿ ವಿಶೇಷ ಪ್ಯಾಕೇಜ್ ಜಾರಿಗೆ ಮುಂದಾದರೆ ರೈತರು ಸಮಸ್ಯೆಯಿಂದ ಸ್ವಲ್ಪಮಟ್ಟಿಗಾದರೂ ಪಾರಾಗುತ್ತಾರೆ ಎಂದರು.
 ಪಶು ಸಂಗೋಪನಾ ಇಲಾಖೆಯಿಂದ ಬೇರೆ ಇಲಾಖೆಗೆ ಎರವಲು ಸೇವೆಯ ಮೇಲೆ ಹೋಗಿರುವ ಅಧಿಕಾರಿಗಳನ್ನು ಕೂಡಲೇ ವಾಪಸ್ ಕರೆಸಿಕೊಳ್ಳುವ ಮೂಲಕ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಬೇಕೆಂದೂ ಒತ್ತಾಯಿಸಿದರು. ಅಬ್ಬಣಿ ಶಿವಪ್ಪ, ಕೊತ್ತಮಿರಿ ಜಿ. ಮಂಜುನಾಥ್, ಜಿ.ನಾರಾಯಣಸ್ವಾಮಿ, ರಾಮೇಗೌಡ, ಜಿ.ಎನ್. ಜಯರಾಮಪ್ಪ, ತಿರುಮಲಹಟ್ಟಿ ದೇವರಾಜ್, ಶ್ಯಾಮಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement