ಭೂ ಹಗರಣ ಆರೋಪಿಗಳ ಬಂಧನಕ್ಕೆ ಆಗ್ರಹ
ಚಿಂತಾಮಣಿ: ಪಟ್ಟಣ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ನಡೆದಿರುವ ಭೂ ಹಗರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲಗೊಂಡಿದ್ದಾರೆಂದು ತಾಲೂಕು ಮಾನವ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷ ಗೋಪಲ್ಲಿ ರಘುನಾಥರೆಡ್ಡಿ ಆರೋಪಿಸಿದರು.
ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನಾಗಾರರನ್ನು ಉದ್ದೇಶಿಸಿ ಮಾತನಾಡಿ, ಕಳೆದ ಒಂದು ತಿಂಗಳಿಂದ ಬೆಳೆಯುತ್ತಿರುವ ಅಕ್ರಮ ಭೂಮಾಫಿಯಾ ದಂಧೆಗೆ ಸಂಬಂಧಿಸಿ ತಾಲೂಕು ದಂಡಾಧಿಕಾರಿಗಳು ಆರೋಪಿಗಳ ವಿರುದ್ಧ ದೂರು ನೀಡಿದ್ದರು ಸ್ಥಳೀಯ ಪೊಲೀಸರು ಮೀನ ಮೇಷ ಎನಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ಕೂಡಲೇ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ನಂತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.