ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಂತಾರಾಷ್ಟ್ರೀಯ ಮಟ್ಟಕ್ಕೆ ಕಬಡ್ಡಿ ಕೊಂಡೊಯ್ಯಿರಿ: ಹನುಮಂತೇಗೌಡ

Rashmi Kasaragodu
Updated On : 11 Oct 2013, 12:22 pm

ಚಿಕ್ಕಬಳ್ಳಾಪುರ: ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಆಟದ ಮಹತ್ವವನ್ನು ಹೆಚ್ಚಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತುಂಗಕ್ಕೇರಿಸಲು ಪಣ ತೊಡಬೇಕು ಎಂದು ಕರ್ನಾಟಕ ರಾಜ್ಯ ಅಮೇಚೂರ್ ಕಬಡ್ಡಿ ಸಂಸ್ಥೆ ಅಧ್ಯಕ್ಷ ಹನುಮಂತೇಗೌಡ ಹೇಳಿದರು.
ಅವರು ನಗರದ ಹೊರ ವಲಯದ ಕೆ.ವಿ ದೈಹಿಕ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಏರ್ಪಡಿದ್ದ ಸರ್ವ ಸದಸ್ಯರ ಸಭೆಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಬಡ್ಡಿ ಕ್ರೀಡೆಯನ್ನು ಮ್ಯಾಟ್ ಮೇಲೆ ಪ್ರದರ್ಶನ ನೀಡುತ್ತಿದ್ದು ಅದನ್ನು ಗ್ರಾಮೀಣ ಪ್ರದೇಶದಿಂದಲೇ ಪ್ರದರ್ಶನ ನೀಡುವ ಸಂಬಂಧ ಅರಿವು ಮೂಡಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಪಟುಗಳಿಗೆ ಬೇಕಾಗಿರುವ ಸವಲತ್ತುಗಳನ್ನು ರಾಜ್ಯ ಸಂಸ್ಥೆಯಿಂದ ಒದಗಿಸಲಾಗುವುದು ಎಂದರು.
ರಾಜ್ಯ ಸಂಸ್ಥೆ ಪ್ರಧಾನ ಕಾರ್ಯದರ್ಶಿ ವಿ. ಜಯರಾಮ್ ಮಾತನಾಡಿ, ಕಬಡ್ಡಿ ರಾಷ್ಟ್ರ ಹಾಗೂ ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕಾದರೆ ಜಿಲ್ಲಾ ಸಂಸ್ಥೆಯ ವತಿಯಿಂದ ಅನೇಕ ಮಾದರಿಯ ಕಬ್ಬಡಿ ಪಂದ್ಯಾವಳಿಗಳನ್ನು ಆಗ್ಗಿಂದ್ದಾಗ್ಗೆ ಏರ್ಪಡಿಸಿ ಪ್ರೋತ್ಸಾಹಿಸಬೇಕು ಎಂದರು.
ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ಮಾತನಾಡಿ, ಚಿಕ್ಕಬಳ್ಳಾಪುರದಲ್ಲಿ ತಮ್ಮ ಕ್ರೀಡಾ ಸಂಸ್ಥೆಯ ವತಿಯಿಂದ ರಾಜ್ಯ ಮಟ್ಟದ ಕಬಡ್ಡಿ  ಪಂದ್ಯಾವಳಿಗಳನ್ನು ನಡೆಸಲು ಅವಕಾಶ ಮಾಡಿಕೊಡಬೇಕೆಂದು ಕೋರಿದರು.
ರಾಜ್ಯ ಸಂಸ್ಥೆಯ ಉಪಾಧ್ಯಕ್ಷ ಕೃಷ್ಣಮೂರ್ತಿ, ಸಂಘಟನಾ ಕಾರ್ಯದರ್ಶಿ ಪಿಳ್ಳಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸಂಸ್ಥೆಯ ಜಂಟಿ ಕಾರ್ಯದರ್ಶಿ ಎ. ಮುನಿರಾಜು, ಮುನಿವೆಂಕಟಪ್ಪ, ತಾಂತ್ರಿಕ ಸಮಿತಿ ಸದಸ್ಯ ಇಸ್ಮಾಯಿಲ್ ಮುಂತಾದವರು ಭಾಗವಹಿಸಿದ್ದರು.
ಅಸೋಸಿಯೇಷನ್ಗೆ ಆಯ್ಕೆ
ಚಿಕ್ಕಬಳ್ಳಾಪುರ: ಕೆ.ವಿ ದೈಹಿಕ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ಸರ್ವ ಸದಸ್ಯರ ಸಭೆಯಲ್ಲಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯರಾಮ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರಾಗಿ ಕೆ.ವಿ. ನವೀನ್ ಕಿರಣ್, ಉಪಾಧ್ಯಕ್ಷರಾಗಿ ಎಂ.ಬಿ. ಚಿಕ್ಕನರಸಿಂಹಯ್ಯ, ಕೆ.ಆರ್. ಶ್ರೀನಿವಾಸ್, ಎನ್.ಆರ್. ಭರತ್ರೆಡ್ಡಿ  ಮುನಿವೆಂಕಟಪ್ಪ, ಕಾರ್ಯದರ್ಶಿಯಾಗಿ ಡಾ ಎ.ಎಸ್. ಅಮರೇಂದ್ರ, ಜಂಟಿ ಕಾರ್ಯದರ್ಶಿಗಳಾಗಿ ಡಾ. ಎನ್. ಚಂದ್ರಪ್ಪ, ಪಿ. ಮುನಿಸ್ವಾಮಿ, ಆರ್. ವೆಂಕಟೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸಿ.ಎಲ್. ಶ್ರೀನಿವಾಸ್, ಖಜಾಂಚಿಯಾಗಿ ಹೆಚ್.ಎನ್. ಸತ್ಯನಾರಾಯಣ, ಸದಸ್ಯರಾಗಿ ಕೆ. ವಿಜಯಕುಮಾರ್, ಕೆ.ಆರ್. ನರೇಂದ್ರಕುಮಾರ್, ಕೆ.ಹೆಚ್. ರಮೇಶ್, ರವಿ, ಎ.ಎನ್. ನಾರಾಯಣಸ್ವಾಮಿ, ವೀರಾಪುರ ವೆಂಕಟೇಶ್, ಕೆ.ಆರ್.ಅಶ್ವತ್ಥಪ್ಪ, ರಘುನಾಥ್, ಲಿಂಗೇಶ್, ಜಿಲ್ಲಾ ರೆಫರಿ ಮಂಡಳಿಯ ಅಧ್ಯಕ್ಷರಾಗಿ ಜಿ. ಅಶ್ವತ್ಥಪ್ಪ ಆಯ್ಕೆಯಾಗಿದ್ದಾರೆ.
13 ರಂದು ತಂಡದ ಆಯ್ಕೆ
ಚಿಕ್ಕಬಳ್ಳಾಪುರ: ನಗರದ ಸರ್.ಎಂ.ವಿ ಪ್ರೌಢಶಾಲೆಯ ಮೈದಾನದಲ್ಲಿ ಅ.13 ರಂದು ರಾಜ್ಯ ಮಟ್ಟದ ಜೂನಿಯರ್ ಕಬಡ್ಡಿ ಚಾಂಪಿಯನ್ ಶಿಪ್ನಲ್ಲಿ ಭಾಗವಹಿಸುವ ಜಿಲ್ಲಾ ತಂಡದ ಆಯ್ಕೆಯನ್ನು ಮಾಡಲಾಗುವುದು ಎಂದು ಜಿಲ್ಲಾ ಕಬಡ್ಡಿ ಸಂಸ್ಥೆಯ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ತಾಲೂಕುಗಳ 20 ವರ್ಷ ವಯೋವುತಿಯುಳ್ಳ ಬಾಲಕ ಹಾಗೂ ಬಾಲಕಿಯರ ಕಬಡ್ಡಿ  ತಂಡಗಳ ಆಯ್ಕೆ ನಡೆಯಲಿದ್ದು, ಕ್ರೀಡಾಪಟುಗಳು ತಮ್ಮ ಜನ್ಮ ದಿನಾಂಕ ಸೂಚಿಸುವ ಶಾಲಾ ದೃಢೀಕೃತ ಪತ್ರದೊಂದಿಗೆ ಅ.13 ರಂದು ಬೆಳಗ್ಗೆ  9.30 ರೊಳಗೆ ವರದಿ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಜಿಲ್ಲಾ ತಂಡಕ್ಕೆ ಆಯ್ಕೆಯಾದ ಕ್ರೀಡಾಪಟುಗಳು ಕರ್ನಾಟಕ ರಾಜ್ಯ ಅಮೆಚ್ಯೂರ್ ಕಬಡ್ಡಿ  ಸಂಸ್ಥೆಯ ವತಿಯಿಂದ ಚಿತ್ರದುರ್ಗದಲ್ಲಿ ನಡೆಯಲಿರುವ ಬಾಲಕ ಹಾಗೂ ಬಾಲಕಿಯರ ರಾಜ್ಯ ಮಟ್ಟದ ಜೂನಿಯರ್ ಚಾಂಪಿಯನನ್ಶಿಪ್ನಲ್ಲಿ ಪಾಲ್ಗೊಳ್ಳಲಿದ್ದು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಾರ್ಯದರ್ಶಿ ಡಾ ಎ.ಎಸ್. ಅಮರೇಂದ್ರ, ಮೊ.ಸಂಖ್ಯೆ 9845303811 ಅನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement