ತಾಲೂಕು ಕೇಂದ್ರಕ್ಕೆ ಆಗ್ರಹಿಸಿ ಮನವಿ
ಕೆಜಿಎಫ್: ಕ್ಷೇತ್ರದ ಬೇತಮಂಗಲ ಹೋಬಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಬೇತಮಂಗಲ ತಾಲೂಕು ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಎಂ. ವೆಂಕಟರಾಮೇಗೌಡ ನೇತೃತ್ವದಲ್ಲಿ ಕೋಲಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ಬೇತಮಂಗಲ ಹೋಬಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಗಿದೆ ಎಂದು ಸಮಿತಿಯ ಮುಖಂಡರು ತಿಳಿಸಿದ್ದಾರೆ.
ಈ ವೇಳೆ ವಿಎಸ್ಎಸ್ಎನ್ ಅಧ್ಯಕ್ಷ ದೊಡ್ಡಕಾರಿ ಪ್ರಸನ್ನ, ಉಪಾಧ್ಯಕ್ಷ ಗೋಪಾಲ್, ನಿರ್ದೇಶಕರಾದ ನಂಜುಂಡೇಗೌಡ, ಕೋದಂಡರಾಮಯ್ಯ, ಕರುಣಾಕರ, ಗಣೇಶ್, ಪುರುಷೋತ್ತಮರೆಡ್ಡಿ ಹಾಜರಿದ್ದರು.