ವಿದ್ಯುತ್ ಕಂಬಕ್ಕೆ ಟಿಪ್ಪರ್ ಡಿಕ್ಕಿ; ತಪ್ಪಿದ ಅನಾಹುತ
ಮುಳಬಾಗಲು: ಪಟ್ಟಣದ ಹೈದರಿ ನಗರದಲ್ಲಿ ವೇಗವಾಗಿ ಬಂದ ಟಿಪ್ಪರ್ ಎರಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ವಿದ್ಯುತ್ ಸಂಪರ್ಕ ಕಡಿತದ ಕಾರಣ ಯಾವುದೇ ಹಾನಿಯಾಗಿಲ್ಲ.
ಬೆಸ್ಕಾಂ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ತೆಗೆದುಕೊಂಡರು.