ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಿವಿಧ ಕಾಮಗಾರಿಗಳಿಗೆ ಚಾಲನೆ

Rashmi Kasaragodu
Updated On : 11 Oct 2013, 12:21 pm

ಟೇಕಲ್: ಮಾಲೂರು ತಾಲೂಕಿನ ಎಲ್ಲ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸುವುದೇ ತನ್ನ ಧ್ಯೇಯವಾಗಿದೆ ಎಂದು ಶಾಸಕ ಕೆ.ಎಸ್. ಮಂಜುನಾಥಗೌಡ ತಿಳಿಸಿದರು.
ಕೆ.ಜಿ. ಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂದಾಜು ರು.   1.25 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ತಾಲೂಕನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪ್ರಯತ್ನ ನಡೆಸುವುದಾಗಿ ಹೇಳಿದರು.
ಜಿಪಂ ಸದಸ್ಯೆ ರತ್ನಮ್ಮ ನಂಜೇಗೌಡ ಮಾತನಾಡಿ, ಜಿಪಂ ಕ್ಷೇತ್ರದಲ್ಲಿ ಅಂದಾಜು ರು.   4 ಕೋಟಿ ವೆಚ್ಚದಲ್ಲಿ 32 ಓವರ್ ಹೆಡ್ ಟ್ಯಾಂಕ್ ಅಳವಡಿಸಲಾಗಿದೆ ಎಂದರು.
ಶಾಸಕರು ಬಸಾಪುರ, ಅನಿಗಾನಹಳ್ಳಿ, ಕೂಗಿಟಿಗಾನಹಳ್ಳಿಗಳಲ್ಲಿ ಜಿಪಂನಿಂದ ಮಂಜೂರಾಗಿದ್ದ ಓವರ್ ಹೆಡ್ ಟ್ಯಾಂಕ್ಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಸಿಮೆಂಟ್ ರಸ್ತೆಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement