ಹಾವು ಕಚ್ಚಿ ಮಹಿಳೆ ಸಾವು
ಗುಡಿಬಂಡೆ: ಹಾವು ಕಚ್ಚಿ ಮಹಿಳೆ ಮೃತಪಟ್ಟಿರುವ ಘಟನೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೇಣುಮಾಕಲಹಳ್ಳಿ ನಿವಾಸಿ ಮುನಿಲಕ್ಷ್ಮಮ್ಮ(36) ಹಾವು ಕಡಿತದಿಂದ ಮೃತಪಟ್ಟ ಮಹಿಳೆ. ಜೋಳದ ತೋಟದಲ್ಲಿ ರಾತ್ರಿ ಕಾವಲುಕಾಯಲು ಹೋಗಿದ್ದಾಗ ಹಾವು ಕಚ್ಚಿದೆ. ಕೂಡಲೇ ಆಕೆಯನ್ನು ಗುಡಿಬಂಡೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆತಂದರು ಅಲ್ಲಿಂದ ಜಿಲ್ಲಾಸ್ಪತ್ರೆಗೆ ಹೋಗುತ್ತಿದ್ದ ಮಾರ್ಗದಲ್ಲಿ ಮೃತಪಟ್ಟಿದ್ದಾರೆ. ಗುಡಿಬಂಡೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.