ಅಪಘಾತ; ಮಹಿಳೆ ಸಾವು
ಮುಳಬಾಗಲು: ರಾಷ್ಟ್ರೀಯ ಹೆದ್ದಾರಿಯ ಎಂ.ಎನ್. ಹಳ್ಳಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಮೃತರನ್ನು ತಾಲೂಕಿನ ಮಂಚಿಗಾನಹಳ್ಳಿ ಗ್ರಾಮದ ಕಮಲಾಕ್ಷಮ್ಮ(50) ಎಂದು ಗುರ್ತಿಸಲಾಗಿದೆ. ಮುಳಬಾಗಲು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆ
ಗುಡಿಬಂಡೆ: ಪಟ್ಟಣದ ನ್ಯೂ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಜೆ.ಸಿ. ಸಂಜನ ಇತ್ತೀಚೆಗೆ ಚಿಕ್ಕಬಳ್ಳಾಪುರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕವೃಂದ ಅಭಿನಂದನೆ ವ್ಯಕ್ತಪಡಿಸಿದೆ.