ಕೊಳವನಹಳ್ಳಿಗೆ ಸೌಕರ್ಯಕ್ಕೆ ರು. 5 ಲಕ್ಷ ಅನುದಾನ ಸುಧಾಕರ್ ಭರವಸೆ
ಚಿಕ್ಕಬಳ್ಳಾಪುರ: ತಾಲೂಕಿನ ಕೊಳವನಹಳ್ಳಿ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶಾಸಕರ ನಿಧಿಯಿಂದ 5 ಲಕ್ಷ ರು. ಅನುದಾನ ನೀಡುವುದಾಗಿ ಶಾಸಕ ಡಾ.ಕೆ. ಸುಧಾಕರ್ ಭರವಸೆ ನೀಡಿದರು. ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಡೀ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಹಗಲಿರುಳು ಶ್ರಮಿಸುವುದಾಗಿ ತಿಳಿಸಿದರು. ತಾಲೂಕು ವವ್ಯಸಾಯ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕಾಗಿ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಪಡಿಸಿದ್ದು ಪಿ.ಎನ್. ಕೃಷ್ಣಪ್ಪ, ಎ.ಎನ್. ಕೃಷ್ಣಪ್ಪ, ಶ್ರೀರಾಮರೆಡ್ಡಿ, ರಾಮಚಂದ್ರಪ್ಪ, ಕವಿತಾ, ರತ್ನಮ್ಮ, ಗೋವಿಂದರೆಡ್ಡಿ, ಡಿ. ಕೃಷ್ಣಪ್ಪ ಅಭ್ಯರ್ಥಿಗಳಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯ ಕೇಶವರೆಡ್ಡಿ, ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ, ಬ್ಲಾಕ್ ತಕಾಂಗ್ರೆಸ್ ಅಧ್ಯಕ್ಷ ಗೋವಿಂದಸ್ವಾಮಿ, ಕೃಷ್ಣಮೂರ್ತಿ, ಮುಖಂಡರಾದ ದ್ಯಾವಪ್ಪ, ಚೆನ್ನಕೇಶವರೆಡ್ಡಿ, ಪಿಳ್ಳೇಗೌಡ ಮುಂತಾದವರು ಉಪಸ್ಥಿತರಿದ್ದರು.