ಮಹಿಳೆ ಜತೆ ಅಸಭ್ಯ ವರ್ತನೆ: ಆಟೋ ಚಾಲಕನಿಗೆ ಗೂಸ
ಚಿಂತಾಮಣಿ: ಆಟೋ ಚಾಲಕನೊಬ್ಬ ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನವನ್ನು ಚಾಲನೆ ಮಾಡಿ ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದರೆಂದು ಆರೋಪಿಸಿ ಸಾರ್ವಜನಿಕರು ಹಿಡಿದು ಥಳಿಸಿದ ಪರಿಣಾಮ ಪಟ್ಟಣದ ದೊಡ್ಡಪೇಟೆ ರಸ್ತೆಯ ಜಾಮಿಯಾ ಮಸೀದಿ ಬಳಿ ಸ್ವಲ್ಪ ಹೊತ್ತು ಬಿಗುವಿನ ವಾತಾವರಣ ಉಂಟಾದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಗುಂಪನ್ನು ಚದುರಿಸಿ ಈ ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ್ದಾರೆ.