ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ಬಂಗಾರಪೇಟೆ: ದಲಿತರಿಗೆ ಮೂಲ ಸೌಲಭ್ಯ ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದು ಕೂಡಲೆ ಸರ್ಕಾರದ ಯೋಜನೆಗಳು ಸಕಾಲಕ್ಕೆ ಅರ್ಹರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಸಮಹಾ ಸಭಾ ಮುಖಂಡರು ಪಟ್ಟಣದಲ್ಲಿ ಪ್ರತಿಭಟನೆ ಮಾಡಿದರು.
ಸರ್ಕಾರ ದಲಿತರಿಗೆ ಹಾಗೂ ಹಿಂದುಳಿದವರಿಗೆ ಪ್ರತಿ ವರ್ಷ ಹತ್ತಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದರೂ ಸಕಾಲಕ್ಕೆ ಅರ್ಹ ಫಲಾನುಭವಿಗಳಿಗೆ ಅದು ತಲುಪದೆ ಮಧ್ಯವರ್ತಿಗಳ ಪಾಲಾಗುತ್ತಿದೆ ಎಂದು ಆರೋಪಿಸಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ನಂತರ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಸಂಘದ ರಾಜ್ಯದ್ಯಕ್ಷ ಮುನಿರಾಜು, ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಬಾಬು, ಉಪಾಧ್ಯಕ್ಷ ಅಲ್ತಾಪ್ ಅನ್ಸಾರಿ, ಬಾಲು ಇಂದ್ರಾಣಿ, ಮುನಿವೆಂಕಟಪ್ಪ, ಮೊಹಮ್ಮದ್ ದಸ್ತಗಿರಿ, ಶ್ರೀನಿವಾಸ್, ವೆಂಕಟಗಿರಿ ಇದ್ದರು.