ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಕ್ರಮ ಮರಳು ಸಾಗಣೆಗೆ ಬೆಂಬಲವಿಲ್ಲ

Srinivasa Murthy VN
Updated On : 18 Oct 2013, 12:39 pm

ಕೋಲಾರ: ಅಕ್ರಮ ಮರಳು ಸಾಗಾಣಿಕೆಗೆ ನನ್ನ ಬೆಂಬಲವಿಲ್ಲ ಎಂದು ಶಾಸಕ ವರ್ತೂರು ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ತಾಲೂಕಿನ ಚೋಳಘಟ್ಟ ಗ್ರಾಮದಲ್ಲಿ ನಬಾರ್‌ಡ್ಯೋಜನೆಯಲ್ಲಿ ಸುಮಾರು 75 ಲಕ್ಷ ರು. ವೆಚ್ಚದಲ್ಲಿ ನಡೆಸಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಕ್ರಮ ಮರಳು ಸಾಗಾಣಿಕೆಯಿಂದ ನಡೆಯುತ್ತಿರುವ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು. ಮರಳು ಸಾಗಾಣಿಕೆದಾರರು ಸರ್ಕಾರದ ನೀತಿ ನಿಯಮಾವಳಿಗಳನ್ನು ಪಾಲಿಸಬೇಕು ಮತ್ತು ಅಕ್ರಮ ಮರಳು ಸಾಗಾಣಿಕೆ ವಿಚಾರದಲ್ಲಿ ನಾನು ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಗ್ರಾಮದಲ್ಲಿ ನಬಾರ್ಡ್ ಜನೆಯಲ್ಲಿ ಉತ್ತಮವಾದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಚುನಾವಣೆಗೂ ಮುನ್ನಾ ನೀಡಿದ ಅಭಿವೃದ್ಧಿ ಕಾರ್ಯಗಳ ಭರವಸೆಯನ್ನು ಈಡೇರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಾಪಂ ಉಪಾಧ್ಯಕ್ಷೆ ಸರಸ್ವತಿ ಮುನಿಕೃಷ್ಣ, ಗ್ರಾಪಂ ಮಾಜಿ ಸದಸ್ಯ ರಾಮಚಂದ್ರ, ನಾಗರಾಜು, ನಾರಾಯಣಸ್ವಾಮಿ, ಲಕ್ಷ್ಮೀ ನಾರಾಯಣಸ್ವಾಮಿ, ಚಿನ್ನಪ್ಪ, ವೆಂಕಟೇಶಪ್ಪ, ಮುದುವತ್ತಿ ಆಂಜಿನಪ್ಪ, ಗುತ್ತಿಗೆದಾರರಾದ ಚಂದ್ರೇಗೌಡ, ಮಂಜುನಾಥ್ ಇದ್ದರು.

ಉದ್ಯೋಗ ಮೇಳ: ಶಾಲೆಗಳಲ್ಲಿ ಅರ್ಜಿ ಲಭ್ಯ
ಕೋಲಾರ: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನವೆಂಬರ್ 9 ಮತ್ತು 10 ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಉದ್ಯೋಗ ಪಡೆಯಲು ಇಚ್ಚಿಸುವವರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟವರಿಗೆ ತಲುಪಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಉದ್ಯೋಗ ಮೇಳದ ಉಸ್ತುವಾರಿ ನೋಡಿಕೊಳ್ಳಲು ನೇಮಕಗೊಂಡಿರುವ ದಯಾನಂದರೆಡ್ಡಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆ ನಡೆಯುತ್ತಿದೆ ಎಂದರು. ದಯಾನಂದರೆಡ್ಡಿ ಮಾತನಾಡಿ, ಕೇಂದ್ರ ಸಣ್ಣ ಮತ್ತು ಮದ್ಯಮ ಕೈಗಾರಿಕೆಗಳ ಸಚಿವ ಕೆ.ಎಚ್. ಮುನಿಯಪ್ಪನವರು ಎಲ್ಲಾ ಗ್ರಾಪಂ, ತಾಪಂ ಮತ್ತು ಜಿಪಂ ಸದಸ್ಯರಿಗೆ ವೈಯಕ್ತಿಕವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕ ಮತ್ತು ಯುವತಿಯರು ಭಾಗವಹಿಸಲು ಅರಿವು ಮೂಡಿಸಲು ಪತ್ರದ ಮೂಲಕ ಕೋರಲಿದ್ದಾರೆಂದರು. ಬೃಹತ್ ಉದ್ಯೋಗ ಮೇಳದಲ್ಲಿ 200 ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು ಭಾಗವಹಿಸಲಿದ್ದು ಯುವಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಮಂಜುನಾಥ್, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಶ್ರೀನಿವಾಸ್, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪದ್ಮನಾಭ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement