ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನಾಳೆ ವಿಚಾರ ಸಂಕಿರಣ

Srinivasa Murthy VN
Updated On : 18 Oct 2013, 12:37 pm

ಚಿಕ್ಕಬಳ್ಳಾಪುರ: ನಗರದ ಅಂಬೇಡ್ಕರ್ ಭವನದಲ್ಲಿ ಅ.19 ರಂದು ಬೆಳಿಗ್ಗೆ 11 ಗಂಟೆಗೆ ಮಹಾತ್ಮಾ ಗಾಂಧೀಜಿಯವರ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ವಾರ್ತಾ ಇಲಾಖೆ, ಮೈರಾಡ ಸಂಸ್ಥೆ, ಸೌಖ್ಯ ಸಂಜೀವಿನಿ ಸಂಸ್ಥೆ, ಉನ್ನತಿ ಸಮಗ್ರ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ. ವಿಶಾಲ್ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಶಾಸಕ ಡಾ.ಕೆ. ಸುಧಾಕರ್ ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಿವಪ್ರಸಾದ್, ಉಪವಿಭಾಗಾಧಿಕಾರಿ ಕೆ.ಟಿ. ಶಾಂತಲಾ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕೃಷ್ಣಪ್ಪ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಾರಪ್ಪ ಭಾಗವಹಿಸಲಿದ್ದಾರೆ. ಪ್ರಾಧ್ಯಾಪಕ ಡಾ. ಕೋಡಿರಂಗಪ್ಪ, ಹಿರಿಯ ವಕೀಲ ಶ್ರೀ ಟಿ.ಎಸ್. ವಿಜಯಶಂಕರ್ ಉಪನ್ಯಾಸ ನೀಡಲಿದ್ದಾರೆ.

ನಾಳೆ ಲೋಕಾಯುಕ್ತ ಎಸ್ಪಿಯಿಂದ ಕುಂದುಕೊರತೆಗಳ ವಿಚಾರಣೆ
ಕೋಲಾರ: ಶ್ರೀನಿವಾಸಪುರ ತಾಲೂಕಿನ ರೋಣೂರು ಹೋಬಳಿ ವ್ಯಾಪ್ತಿಗೆ ಸೇರಿದ ಗ್ರಾಮಗಳ ಸಾರ್ವಜನಿಕರಿಂದ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ವಿಳಂಬ, ಅಧಿಕಾರಿಗಳ ನಿರ್ಲಕ್ಷ್ಯ ಮಾಡುತ್ತಿದ್ದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿವಿರುದ್ಧ ಲಿಖಿತ ಅಹವಾಲು ಸಲ್ಲಿಸಲು ಅ.19 ರಂದು 10.30ಕ್ಕೆ ಶ್ರೀನಿವಾಸಪುರ ತಾಲೂಕಿನ ಅರಿಕುಂಟೆ ಗ್ರಾಪಂ ಸಭಾಂಗಣದಲ್ಲಿ ಜಿಲ್ಲಾ ಲೋಕಾಯುಕ್ತ ಆಧೀಕ್ಷಕರು ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಶ್ರೀನಿವಾಸಪುರ ತಾಲೂಕಿನ ರೋಣೂರು ಹೋಬಳಿ ವ್ಯಾಪ್ತಿಗೆ ಬರುವ ಎಲ್ಲಾ ಅಧಿಕಾರಿಗಳು ಭಾಗವಹಿಸುತ್ತಿದ್ದು, ದೂರಗಳಿದ್ದಲ್ಲಿ ಸದರಿ ದಿನದಂದು ಲಿಖಿತ ದೂರನ್ನು ನೀಡಲು ಸಾರ್ವಜನಿಕರಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement