ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರಾಷ್ಟ್ರೀಯ ಹಬ್ಬದಂತೆ ಆಚರಿಸಿ

Vishwanath S
Updated On : 19 Oct 2013, 12:24 pm

ಗುಡಿಬಂಡೆ: ಮಹಾನ್ ಚೇತನ ವಾಲ್ಮೀಕಿಯವರ ದಿನಾಚರಣೆಯನ್ನು ಕೇವಲ ನಾಯಕ ಜನಾಂಗಕ್ಕೆ ಸೀಮಿತವಾಗದೇ ಇಡೀ ಮನುಜ ಕುಲ ಆಚರಿಸುವಂತಹ ಹಬ್ಬವಾಗಬೇಕೆಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಭಿಪ್ರಾಯಪಟ್ಟರು.
ಪಟ್ಟಣದ ಬಾಲಕರ ಪ್ರೌಢಶಾಲೆಯಲ್ಲಿ ತಾಲೂಕು ಆಡಳಿತ, ತಾಪಂ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ನಾಯಕ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಾಲ್ಮಿಕಿ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿ, ಇಡೀ ಜಗತ್ತಿನಲ್ಲೇ ಭವ್ಯ ಸಂಸ್ಕೃತಿಯನ್ನು ಹೊಂದಿರುವ ಭಾರತ ದೇಶದ ಕೀರ್ತಿ ರಾಮಾಯಣದಿಂದಲೇ ಎಂದರೆ ತಪ್ಪಾಗಲಾರದು ಎಂದರು.
ಮುಖ್ಯ ಬಾಷಣಕಾರರಾಗಿ ನ್ಯೂ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಪಿ.ಎನ್. ರಾಜಶೇಖರ್ ಮಾತನಾಡಿ, ಇತ್ತೀಚಿಗೆ ಆದರ್ಶ ವ್ಯಕ್ತಿಗಳನ್ನು ಕೇವಲ ಜಾತಿಗೆ ಸೀಮಿತ ಮಾಡುತ್ತಿರುವುದು ನೋವಿನ ಸಂಗತಿಯಾಗಿದೆ ಎಂದರು.
ತಹಸೀಲ್ದಾರ್ ಎಸ್. ಶೈಲಜ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ನಡೆದ ಮೆರವಣಿಗೆಗೆ ಶಾಸಕ ಸುಬ್ಬಾರೆಡ್ಡಿ ಚಾಲನೆ ನೀಡಿದರು. ಪಪಂ ಸದಸ್ಯರು, ತಾಪಂ ಸದಸ್ಯರು, ಜಿಪಂ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಕ್ಷಿತ ಭರತನಾಟ್ಯ ಎಲ್ಲರ ಗಮನ ಸೆಳೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement