ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸರ್ಕಾರದ ಯೋಜನೆಗಳು ಸದುಪಯೋಗವಾಗಬೇಕು

Vishwanath S
Updated On : 19 Oct 2013, 12:25 pm

ಮುಳಬಾಗಲು: ಪರಿಶಿಷ್ಟಜಾತಿ ಮತ್ತು ಪಂಗಡಗಳಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರ ಸದುಪಯೋಗಪಡಿಸಿಕೊಳ್ಳಲು ಶಾಸಕ ಕೊತ್ತೂರು ಜಿ.ಡಾ. ಮಂಜುನಾಥ್ ಕರೆ ನೀಡಿದರು.
ಪಟ್ಟಣದ ನೇತಾಜಿ ಕ್ರೀಡಾಂಗಣದಲ್ಲಿ ಶುಕ್ರವಾರ ನಾಡ ಹಬ್ಬಗಳ ಆಚರಣಾ ಸಮಿತಿ ಮತ್ತು ವಾಲ್ಮೀಕಿ ನಾಯಕ ಸೇವಾ ಸಂಘದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿ, ವಾಲ್ಮೀಕಿ ಜನಾಂಗದ ಬಹು ದಿನಗಳ ಬೇಡಿಕೆಯಾದ ಸಮುದಾಯ ಭವನ ನಿರ್ಮಾಣಕ್ಕಾಗಿ ತಾಲೂಕು ಆಡಳಿತಕ್ಕೆ ಜಮೀನು ಮಂಜೂರು ಮಾಡಲು ಕೋರಿರುವುದಾಗಿ ನಿವೇಶನ ಸಿಕ್ಕ ನಂತರ ಸರ್ಕಾರದಿಂದ ಅನುದಾನ ಪಡೆದು ಭವನ ನಿರ್ಮಿಸುವುದಾಗಿ ಹೇಳಿದರು. ತಹಸೀಲ್ದಾರ್ ಡಿ.ವಿ. ರಾಮಮೂರ್ತಿ, ಜಿಪಂ ಉಪಾಧ್ಯಕ್ಷೆ ಅಲುವೇಲಮ್ಮ, ತಾಪಂ ಅಧ್ಯಕ್ಷೆ ಸುಬ್ಬಮ್ಮ, ಸದಸ್ಯೆ ಲಕ್ಷ್ಮಿದೇವಮ್ಮ ಸಾತನೂರು ಶ್ರೀನಿವಾಸ್, ಗಣೇಶ್, ಉತ್ತನೂರು ಶ್ರೀನಿವಾಸ್, ಡಾ. ರಮಾನಂದ ಭಾಗವಹಿಸಿದ್ದರು. ತಾಲೂಕಿನ 30 ಗ್ರಾಪಂಗಳಿಂದ ಮೂವತ್ತಕ್ಕೂ ಹೆಚ್ಚಿನ ಪಲ್ಲಕ್ಕಿಗಳು ಭಾಗವಹಿಸಿದ್ದವು. ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಂಡ್‌ಗಳನ್ನು ವಿತರಿಸಲಾಯಿತು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement