ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರಸ್ತೆ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಲು ಮನವಿ

Vishwanath S
Updated On : 28 Oct 2013, 12:14 pm

ಬಂಗಾರಪೇಟೆ: ಪಟ್ಟಣದ ಜನಸಂಖ್ಯೆಗೆ ತಕ್ಕಂತೆ ರಸ್ತೆಗಳಿಲ್ಲದೆ ಪ್ರತಿದಿನ ಅಪಘಾತಗಳು ಸಂಭವಿಸುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಪಟ್ಟಣದ ಎಸ್.ಎನ್. ರೆಸಾರ್ಟ್‌ನಿಂದ ದೇಶಿಹಳ್ಳಿವರೆಗೂ ದ್ವಿಪಥ ರಸ್ತೆಯನ್ನಾಗಿ ಮಾಡಲು ಸುಮಾರು ರು. 47ಕೋಟಿ ಮಂಜೂರು ಮಾಡಬೇಕೆಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ನೇತೃತ್ವದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದಾರಾಮಯ್ಯರನ್ನು ಭೇಟಿ ಮಾಡಿ ಒತ್ತಾಯಿಸಿದೆ.
ಗ್ರಾಮಾಂತರ ಪ್ರದೇಶಗಳ ರಸ್ತೆಗಳೂ ಅವ್ಯವಸ್ಥೆಯಿಂದ ಕೂಡಿರುವ ಪರಿಣಾಮ ಕೆಲವು ಭಾಗಗಳಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಹದಗೆಟ್ಟಿರುವ ರಸ್ತೆಗಳಿಗೆ ಮೋಕ್ಷ ಕಲ್ಪಿಸಲು ರು. 16.80 ಕೋಟಿ ವಿಶೇಷ ಪ್ಯಾಕೇಜ್ ನೀಡಬೇಕು ಮತ್ತು ಎಸ್ಸಿಎಸ್ಟಿ ಕಾಲೋನಿಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ರು. 2.60 ಕೋಟಿ ಬಿಡುಗಡೆ ಮಾಡಬೇಕೆಂದು ಭಾನುವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಶಾಸಕರ ತಂಡದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆಂದು ಶಾಸಕ ನಾರಾಯಣಸ್ವಾಮಿ ತಿಳಿಸಿದ್ದಾರೆ. ನಿಯೋಗದಲ್ಲಿ ಬ್ಲಾಕ್ ಅಧ್ಯಕ್ಷ ಪಾರ್ಥಸಾರಥಿ, ಮಂಜುನಾಥಗೌಡ, ಕೆ. ಚಂದ್ರಾರೆಡ್ಡಿ, ರಾಮಪ್ಪ, ಹೊಸರಾಯಪ್ಪ, ಕುಂಬಾರಪಾಳ್ಯ ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement