ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೆರೆಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಮಂಜೂರಿಗೆ ಜಿ.ಪಂ ಅಧ್ಯಕ್ಷರ ಮನವಿ

Rashmi Kasaragodu
Updated On : 29 Oct 2013, 12:24 pm

ಕೋಲಾರ: ಜಿಲ್ಲೆಯ ಎಲ್ಲಾ ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಮಂಜೂರು ಮಾಡಿಸಲು ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಹಾಗೂ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ ಮನವಿ ಮಾಡಿದರು. ನಗರದಲ್ಲಿ ಸೋಮವಾರ ಮಾಧ್ಯಮ ಅಕಾಡೆಮಿಯಿಂದ ನಡೆದ ಅಂತರ್ಜಲ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕಿಂತ ಮೊದಲು ಕೆರೆಗಳ ಅಭಿವೃದ್ಧಿ ಆಗುವುದು ಅವಶ್ಯಕವೆಂದು ಹೇಳಿದರು. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಜಿಲ್ಲೆಯಲ್ಲಿನ ಕೆರೆಗಳ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಎಷ್ಟು ಹಣ ನೀಡಲಾಗಿದೆ, ಯಾವ ಯಾವ ಯೋಜನೆಗಳಿಗೆ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ಲೆಕ್ಕ ಪಡೆಯುವಂತೆ ಅವರು ಜಿಲ್ಲೆಯ ಜನಪ್ರತಿನಿಧಿಗಳಿಗೆ ಒತ್ತಾಯಿಸಿದರು. ಜಿಲ್ಲೆಯ ಎಲ್ಲಾ ಕೆರೆಗಳು ಶಿಥಿಲಗೊಂಡಿವೆ. ಜಿಲ್ಲೆಯ ಬಹುತೇಕ ಕಡೆ ಕೆರೆಗಳು ಒತ್ತುವರಿಯಾಗಿವೆ. ನಾನು ಸೇರಿದಂತೆ ಅನೇಕರು ಒತ್ತುವರಿ ಮಾಡಿದ್ದೇವೆ. ಆದರೆ, ತೆರವು ಕಾರ್ಯ ನಡೆಯುತ್ತಿಲ್ಲವೆಂದು ಹೇಳಿದರು. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಕನಿಷ್ಠ ಎರಡು ಕೆರೆಗಳ ಒತ್ತುವರಿ ತೆರವು ಮಾಡಿಸುವುದಾಗಿ ಸರ್ಕಾರ ತಿಳಿಸಿದೆ. ಇದಕ್ಕೆ ಜನತೆಯ ಸಹಕಾರ ಬೇಕು ಎಂದ ಅವರು, ಕಾವೇರಿಗಾಗಿ ಮಂಡ್ಯ ಮೈಸೂರಿನಲ್ಲಿ ಹೋರಾಟ ನಡೆದರೆ ಅದನ್ನು ಬೆಂಬಲಿಸಿ ನಾವಿಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಆದರೆ, ನಮ್ಮ ಸಮಸ್ಯೆಗೆ ಬೇರೆಯವರು ಸ್ಪಂಧಿಸುತ್ತಿಲ್ಲ. ನೀರಿನ ವಿಚಾರದಲ್ಲಿ ಪ್ರತಿಯೊಬ್ಬರ ಸಹಕಾರ ಮುಖ್ಯವೆಂದರು. ಶಾಸಕ ಎಸ್.ಎನ್. ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ನಜೀರ್ ಅಹಮ್ಮದ್ ಹಾಗೂ ಶಾಕಿ ವೈ. ರಾಮಕ್ಕ ನೀರಿಗಾಗಿ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಹೋರಾಡಿದಲ್ಲಿ ಮಾತ್ರ ಗುರಿ ಸಾಧನೆ ಆಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement