ಡಿಎಸ್‌ಎಸ್‌ನಿಂದ ತಮಟೆ ಚಳವಳಿ
ಶಿಡ್ಲಘಟ್ಟ: ಇಬ್ಬಗೆಯ ನೀತಿ ಅನುಸರಿಸುತ್ತಿರುವ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ತಾಲೂಕು ದಲಿತ ಸಂಘರ್ಷ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿಯ ಭಾಗವಾಗಿ ಸೋಮವಾರ ತಮಟೆ ಚಳುವಳಿ ಹಮ್ಮಿಕೊಂಡಿತ್ತು. ಸಮಸ್ಯೆಗಳ ಪರಿಹಾರಕ್ಕಾಗಿ ಧರಣಿ, ಪ್ರತಿಭಟನೆ ಮಾಡುತ್ತಿದ್ದು ಅಧಿಕಾರಿಗಳ ನಿರ್ಲಕ್ಷ್ಯಧೋರಣೆ ಮುಂದುವರೆದರೆ ಪರ್ಯಾಯ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ದಸಂಸ ಜಿಲ್ಲಾ ಸಂಚಾಲಕ ಸಿ.ಎಂ. ಮುನಿಯಪ್ಪ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ, ದಲಿತ ವಿದ್ಯಾರ್ಥಿ ಕೂಟ, ದಲಿತ ಮಹಿಳಾ ಒಕ್ಕೂಟದ ತಾಲೂಕು ಪದಾಧಿಕಾರಿಗಳು ಪಾಲ್ಗೊಂಡಿದ್ದರು.