ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪಟನಾ ಸ್ಫೋಟ ಖಂಡಿಸಿ ಬಿಜೆಪಿ ಪ್ರತಿಭಟನೆ

Rashmi Kasaragodu
Updated On : 29 Oct 2013, 12:26 pm

ಚಿಕ್ಕಬಳ್ಳಾಪುರ: ಬಿಹಾರದ ಪಟನಾದಲ್ಲಿ ನಡೆಯುತ್ತಿದ್ದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರ ಸಾರ್ವಜನಿಕ ಸಮಾವೇಶದ ಸಂದರ್ಭದಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿರುವುದನ್ನು ಖಂಡಿಸಿ, ತಪ್ಪಿತಸ್ಥರನ್ನು ಕೂಡಲೇ ಕೇಂದ್ರ ಸರ್ಕಾರ ಬಂಧಿಸಿ ಕಾನೂನು ಕ್ರಮ ಕೊಡಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಂ. ರವಿನಾರಾಯಣರೆಡ್ಡಿ ಒತ್ತಾಯಿಸಿದರು.
ಬಿಹಾರದ ಪಟನಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಸಂಭವಿಸಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ, ತಾಲೂಕು ಘಟಕದ ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಸಭೆ ನಡೆಸುವುದು ಪ್ರತಿಯೊಬ್ಬರ ಹಕ್ಕು, ಸಮಾವೇಶ, ಸಭೆ ನಡೆಯುವ ಸಂದರ್ಭದಲ್ಲಿ ಬಂದೋಬಸ್ತ್ ಕಲ್ಪಿಸುವುದು ಸಂಬಂಧಿತ ಪ್ರದೇಶದ ಸರ್ಕಾರದ ಕರ್ತವ್ಯವಾಗಿದೆ. ಆದರೆ ಬಿಹಾರ ಸರ್ಕಾರ ವಿಫಲವಾಗಿದೆ ಎಂದರು.
ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸಮಾವೇಶಗಳು ಮುಂದಿನ ದಿನದಲ್ಲಿ ದೇಶದ ಉದ್ದಗಲ್ಲಕ್ಕೂ ಆಯೋಜಿತಗೊಂಡಿದ್ದು, ಮುಂದೆ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳಿಗೂ ಹೆಚ್ಚಿನ ಭದ್ರತೆ ಒದಗಿಸುವುದು ಕೇಂದ್ರ ಹಾಗೂ ಸಂಬಂಧಿತ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಪತಿಗಳು ಸಂಬಂಧಪಟ್ಟ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನಗರದ ಶಿಡ್ಲಘಟ್ಟ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ಉಪವಿಭಾಗಾಧಿಕಾರಿ ಕಚೇರಿ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಅವಲಗುರ್ಕಿ ಶ್ರೀನಿವಾಸರೆಡ್ಡಿ, ನಗರ ಘಟಕದ ಅಧ್ಯಕ್ಷ ವಿ. ಸುಬ್ಬರಾಜು, ಹನುಮೇಗೌಡ, ಲಕ್ಷ್ಮೀನಾರಾಯಣಗುಪ್ತಾ, ದೇವಸ್ಥಾನ ಹೊಸಹಳ್ಳಿ ರಾಮಣ್ಣ, ಮಹಿಳಾ ಮೋರ್ಚಾದ ಪ್ರೇಮಲೀಲಾ, ಇಂದ್ರಮ್ಮ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement