ಬೇಡಿಕೆ ಈಡೇರಿಸುವ ಭರವಸೆ
ಬಾಗೇಪಲ್ಲಿ: ಸರ್ಕಾರದ ಮಟ್ಟದಲ್ಲಿ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ದಲಿತರ ಬೇಡಿಕೆಗಳನ್ನು ಈಡೇರಿಸುವುದಾಗಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಭರವಸೆ ನೀಡಿದರು.
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಳೆದ 4 ದಿನಗಳಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಡೆಸುತ್ತಿದ್ದ ಅನಿರ್ದಿಷ್ಟ ಧರಣಿ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದರು.
ಕಳೆದ 4 ದಿನಗಳಿಂದ ತಾಲೂಕು ಕಚೇರಿ ಮುಂದೆ ನಡೆಸುತ್ತಿದ್ದ ಧರಣಿಯನ್ನು ಶಾಸಕರು ಹಾಗೂ ತಹಸೀಲ್ದಾರ್ರವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ ಹಿನ್ನಲೆಯಲ್ಲಿ ಹಿಂತೆಗೆದುಕೊಂಡರು. ವಿ. ಗಂಗುಲಪ್ಪ, ಜಯಂತ್, ಎಲ್.ಎನ್. ನರಸಿಂಹಯ್ಯ, ಜಿ. ನಾರಾಯಣಪ್ಪ, ಕೆ.ಸಿ. ರವಣಪ್ಪ, ಪುರಸಭೆ ಸದಸ್ಯ ನಂಜುಂಡಪ್ಪ, ಕೋಟಪ್ಪ. ಎನ್. ನರಸಿಂಹಮೂರ್ತಿ ಇದ್ದರು.