ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಆಧಿವೇಶನಕ್ಕೆ ಅಡ್ಡಿ ಪಡಿಸಿದರೆ ಕ್ರಮ: ಮುಖ್ಯಮಂತ್ರಿ ಎಚ್ಚರಿಕೆ

Rashmi Kasaragodu
Updated On : 30 Oct 2013, 12:04 pm

ಕೋಲಾರ: ಪ್ರವಾಸೋಧ್ಯಮ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿ ಸಚಿವ ಸಂತೋಷ್ ಲಾಡ್ ವಿಚಾರವಾಗಿ ಬೆಳಗಾವಿಯಲ್ಲಿ ನಡೆಯಲಿರುವ ಆಧಿವೇಶನದಲ್ಲಿ ಚರ್ಚಿಸಲು ಬಿಜೆಪಿ ಮತ್ತು ಇನ್ನಿತರ ಶಾಸಕರಿಗೆ ಮುಕ್ತ ಅವಕಾಶವಿದೆ. ಆದರೆ, ಜನ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ನಡೆಸುತ್ತಿರುವ ಆಧಿವೇಶನಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಅವರು ಮಂಗಳವಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಅಚ್ಚನಹಳ್ಳಿಯಲ್ಲಿ ಸ್ಕಾನಿಯಾ ವಾಣಿಜ್ಯ ವಾಹನಗಳ ತಯಾರಿಕಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಶಾಸಕರಿಗೆ ಸಂತೋಷ್ ಲಾಡ್ ವಿಚಾರವಾಗಿ ತಮ್ಮ ಬಳಿ ಇರುವ ದಾಖಲೆಗಳನ್ನು ಆಧಾರವಾಗಿಟ್ಟುಕೊಂಡು ಬೆಳಗಾವಿ ಆಧಿವೇಶನದಲ್ಲಿ ಚರ್ಚೆ ನಡೆಸುವುದಕ್ಕೆ ಸಂವಿಧಾನಬದ್ಧವಾದ ಅವಕಾಶಗಳಿದ್ದು. ಇದನ್ನು ಬಿಟ್ಟು ಆಧಿವೇಶನಕ್ಕೆ ಅಡ್ಡಿಪಡಿಸುವುದಾಗಿ ಹೇಳಿರುವುದು ಗಮನಿಸಿದರೆ ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲವೆಂದು ಪರಿಗಣಿಸಬೇಕಾಗುತ್ತದೆ ಎಂದರು.
 ಶಾದಿ ಭಾಗ್ಯ ಯೋಜನೆ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರವಲ್ಲ ಆರ್ಥಿಕವಾಗಿ ದುರ್ಬಲರಾಗಿರುವ ಎಲ್ಲ ವರ್ಗಕ್ಕೂ ಜಾರಿಗೆ ತರುತ್ತೇವೆ. ಪ್ರಾಯೋಗಿಕವಾಗಿ ಅಲ್ಪಸಂಖ್ಯಾತರಿಗೆ ಶಾದಿ ಭಾಗ್ಯ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.



ಮೋದಿಗೆ ಸೂಕ್ತ ಭದ್ರತೆ
ಕರ್ನಾಟಕಕ್ಕೆ ಯಾವುದೇ ಗಣ್ಯ ವ್ಯಕ್ತಿಗಳು ಬಂದರೂ ರಕ್ಷಣೆ ನೀಡುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯ. ಪಟನಾದಲ್ಲಿ ನಡೆದಿರುವ ಬಾಂಬಬ್ಸ್ಪೋಟದ ಘಟನೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುತ್ತಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ಅಗತ್ಯ ಮತ್ತು ಸೂಕ್ತ ರೀತಿಯಲ್ಲಿ ಭದ್ರತೆ ಒದಗಿಸುತ್ತೇವೆಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement