ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕ್ಷೇತ್ರದ ದಲಿತರ ಸಮಸ್ಯೆ ಪರಿಹರಿಸಲು ಬದ್ಧ: ಶಾಸಕ

Rashmi Kasaragodu
Updated On : 30 Oct 2013, 12:07 pm

ಶಿಡ್ಲಘಟ್ಟ:  ಕ್ಷೇತ್ರದ ದಲಿತರ ಸಮಸ್ಯೆಗಳ ಪರಿಹರಿಸಲು ತಾವು ಬದ್ಧನಿರುವುದಾಗಿ ಶಾಸಕ ಎಂ.ರಾಜಣ್ಣ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ತೆರಳಿ ಅವರಿಂದ ಮನವಿ ಸ್ವೀಕರಿಸಿ ಶಾಸಕರು ಮಾತನಾಡಿದರು. ತಾಲೂಕಿನಾದ್ಯಂತ ಜನತೆಗೆ ಸಿಗಬೇಕಾದ ಮೂಲಭೂತ ಸೌಲಭ್ಯಗಳಿಗಾಗಿ ದಲಿತ ಸಂಘಟನೆಗಳು ಮಾಡುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ದಲಿತರೆಂದರೆ ಒಂದು ಜನಾಂಗವಲ್ಲ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವವರೆಲ್ಲರೂ ದಲಿತರು. ಅಂಬೇಡ್ಕರ್ ಕೂಡಾ ಒಂದು ಜನಾಂಗಕ್ಕೆ ಸೀಮಿತವಾದವರಲ್ಲ, ಅವರು ದೇಶದ ಆಸ್ತಿಯಾಗಿದ್ದಾರೆ. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಕೂಡಲೇ ಸಮಸ್ಯೆಗಳ ಇತ್ಯರ್ಥಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅವಶ್ಯವಿದ್ದಲ್ಲಿ ಈ ಬಗ್ಗೆ ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಸಮಾಲೋಚಿಸುವ ಭರವಸೆ ನೀಡಿದರು. ತಾಲೂಕಿನ ಗಂಗನಹಳ್ಳಿ ಹಾಗೂ ಪಲಿಚೇರ್ಲು ಗ್ರಾಮಗಳಲ್ಲಿ ದಲಿತರ ಸ್ಮಶಾನ ಜಾಗಕ್ಕೆ ಬ್ಯಾಂಕಿನವರು ಸಾಲ ಮಂಜೂರು ಮಾಡಿರುವುದು ಹಾಸ್ಯಾಸ್ಪದವಾಗಿದೆ. ದಲಿತರ ಸ್ಮಶಾನ ಜಾಗಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಮಾರಾಟ ಮಾಡಲು ಕೆಲವರು ಮುಂದಾಗಿದ್ದಾರೆ. ಕೂಡಲೇ ತಹಸೀಲ್ದಾರರು ಮಧ್ಯಪ್ರವೇಶ ಮಾಡಿ ದಲಿತರ ಸ್ಮಶಾನ ಜಾಗವನ್ನು ಉಳಿಸಿಕೊಡಬೇಕು ಎಂದು ಜಿಲ್ಲಾ ಸಂಚಾಲಕ ಸಿ.ಎಂ.ಮುನಿಯಪ್ಪ ಒತ್ತಾಯಿಸಿದರು. ರಾಜ್ಯ ಸಂಘಟನಾ ಸಂಚಾಲಕ ಕೆ.ಸಿ.ರಾಜಾಕಾಂತ್, ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್, ಮಾತನಾಡಿದರು. ಮುಖಂಡ ಬಂಕ್ ಮುನಿಯಪ್ಪ, ಶಿವಾರೆಡ್ಡಿ ಪುರಸಭಾ ಸದಸ್ಯ ಅಪ್ಸರ್‌ಪಾಷಾ ಸಂಘಟನಾ ಸಂಚಾಲಕ ಎನ್.ಎ.ವೆಂಕಟೇಶ್, ಲಕ್ಷ್ಮೀನಾರಾಯಣ, ಟಿ.ಎ.ಚಲಪತಿ, ಹುಜುಗೂರು ವೆಂಕಟೇಶ್ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement