ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜನ ಸಾಮಾನ್ಯರ ಸಂಕಷ್ಟಕ್ಕೆ ಮಾಧ್ಯಮ ಸ್ಪಂದಿಸಲಿ

Rashmi Kasaragodu
Updated On : 30 Oct 2013, 12:08 pm

ಕ.ಪ್ರ.ವಾರ್ತೆ   ಕೋಲಾರ   ಅ.29
ಮಾಧ್ಯಮಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದೆಂದು ಜಿಲ್ಲಾಧಿಕಾರಿ ಡಿ.ಕೆ.ರವಿ ಅಭಿಪ್ರಾಯಪಟ್ಟರು.
ಕರ್ನಾಟಕ ಮಾಧ್ಯಮ ಅಕಾಡೆಮಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ಪತ್ರಕರ್ತರ ಅಧ್ಯಯನ ಶಿಬಿರದ ಸಮಾರೋಪ ಭಾಷಣ ಮಾಡಿದ ಅವರು ಯಾವುದೇ ವರದಿ ಮಾಡುವಾಗ ಸಾಮಾಜಿಕ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸುವುದು ಮಾಧ್ಯಮಗಳ ಮೇಲಿದೆ ಎಂದು ನುಡಿದರು.
ಮನಸ್ಸಿಗೆ ತೋಚಿದ ಸುದ್ದಿ ಮಾಡಿದಲ್ಲಿ ಜನಸಾಮಾನ್ಯರನ್ನು ದಿಕ್ಕು ತಪ್ಪಿಸಿದಂತಾಗುತ್ತದೆ. ಇದರ ಬದಲಿಗೆ ಜನತೆಯ ಸಂಕಷ್ಟಗಳ ಬಗ್ಗೆ ಗಮನ ಸೆಳೆಯುವುದು ಅಗತ್ಯವೆಂದು ಸಲಹೆ ನೀಡಿದರು.
ದೃಶ್ಯ ಮಾಧ್ಯಮಗಳಲ್ಲಿ ಇಂದು ಬಳಕೆಯಾಗುತ್ತಿರುವ ಭಾಷಾ ಪ್ರಯೋಗದ ಬಗ್ಗೆ ವಿಶೇಷ ಚರ್ಚೆಯಾಗಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ್ ಮೊದಲಿಯಾರ್ ತಿಳಿಸಿದರು.
ಹೈಕೋರ್ಟ್ ನ್ಯಾಯವಾದಿ ಪ್ರಮೀಳಾ ನೇಸರ್ಗಿ, ಜಿಪಂ ಸಿಇಒ ಝುಲ್ಪೀಕರುಲ್ಲ, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಪೊನ್ನಪ್ಪ ಮಾತನಾಡಿದರು. ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕೆ.ಎಸ್.ಗಣೇಶ್ ನಿರೂಪಿಸಿದರು. ಜಿಲ್ಲಾ ವಾರ್ತಾಧಿಕಾರಿ ಸಿ.ಎಂ.ರಂಗಾರೆಡ್ಡಿ ವಂದಿಸಿದರು.
ಈ ಸಂದರ್ಭದಲ್ಲಿ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರಿಗೆ ಆರ್ಹತಾ ಪತ್ರವನ್ನು ನೀಡಲಾಯಿತು. ಕರ್ನಾಟಕ ಮಾಧ್ಯಮ ಅಕಾಡೆಮಿಯ 30ನೇ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಕಾರ್ಯಕ್ರಮಕ್ಕೆ ಜಿಲ್ಲೆಯ ಜನತೆ ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡಿದ್ದಾರೆಂದು ಅಕಾಡೆಮಿ ಅಧ್ಯಕ್ಷ ಪೊನ್ನಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement