ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆಗೆ ಸಹಕರಿಸಲು ಮನವಿ
ಚಿಂತಾಮಣಿ: ಸರ್ಕಾರಿ ಶಾಲೆ ಬಿಟ್ಟ ಮಕ್ಕಳ ಹಾಗೂ ಕುಟುಂಬಗಳ ಸಮೀಕ್ಷೆಯನ್ನು 2 ಹಂತಗಳಲ್ಲಿ ಶಿಕ್ಷಣ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಹಾಗೂ ಸಂಘ ಮತ್ತು ಸಂಘಟನೆಗಳ ಸಹಯೋಗದೊಂದಿಗೆ ನವೆಂಬರ್ 6 ಹಾಗೂ 7 ರಂದು ಮತ್ತು ಕುಟುಂಬಗಳ ಸಮೀಕ್ಷೆಯನ್ನು 13 ರಿಂದ 17 ರ ತನಕ ತಾಲೂಕಿನಾದ್ಯಂತ ನಡೆಸಲಾಗುತ್ತದೆಯೆಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ರಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನಿತ ರಹಿತ ಆಶ್ರಮ ಶಾಲೆ ಹಾಗೂ ಕೇಂದ್ರೀಯ ಪಠ್ಯಕ್ರಮ ಅನುಸರಣಾ ಶಾಲೆಗಳು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಎನ್.ಜಿ.ಒ ಗಳು ಮತ್ತು ಸ್ತ್ರೀ ಶಕ್ತಿ ಸಂಘಗಳು ಸಹಕರಿಸಿ ಸಲಹೆ ಸೂಚನೆಗಳೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ರಂಗಯ್ಯ ತಿಳಿಸಿದ್ದಾರೆ.