ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶಾಲೆ ಜಾಗ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Rashmi Kasaragodu
Updated On : 31 Oct 2013, 12:39 pm

ಶಿಡ್ಲಘಟ್ಟ: ಸರ್ಕಾರಿ ಶಾಲೆಯ ಜಾಗವನ್ನು ಗ್ರಾಪಂ ಸದಸ್ಯರೊಬ್ಬರು ಲಪಟಾಯಿಸಲು ಹುನ್ನಾರ ನಡೆಸಿದ್ದು, ಕೂಡಲೇ ಒತ್ತುವರಿ ತೆರವುಗೊಳಿಸಬೇಕೆಂದು ಆಗ್ರಹಿಸಿ ತಾಲೂಕಿನ ಜಿ. ಕುರುಬರಹಳ್ಳಿ ಗ್ರಾಮಸ್ಥರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಜಾನುವಾರುಗಳೊಂದಿಗೆ ಪ್ರತಿಭಟನೆ ನಡೆಸಿದರು.
ಶಾಲಯ ಜಾಗವನ್ನು ಗ್ರಾಪಂ ಸದಸ್ಯ ವೆಂಕಟೇಶ್ ಎಂಬವರು ಲಪಟಾಯಿಸಲು ಹೊರಟಿದ್ದು ಅದನ್ನು ತಡೆಯಬೇಕೆಂದು ತಾಪಂ ಕಾರ್ಯನಿರ್ವಹಣಾಧಿಕಾರಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಆರಕ್ಷಕ ಉಪ ಅಧೀಕ್ಷಕರು ಸೇರಿದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೂ ದೂರು ಸಲ್ಲಿಸಿದರು ಕ್ರಮ ಜರುಗಿಸಿಲ್ಲವೆಂದು ಗ್ರಾಮಸ್ಥರು ಆರೋಪಿಸಿದರು.
ಗ್ರಾಪಂ ಸದಸ್ಯ ವೆಂಕಟೇಶ್ ಈಗಾಗಲೇ ಶಾಲೆಯ ಆವರಣದಲ್ಲಿ ಪಾಯ ಹಾಕಿದ್ದು ಇದರಿಂದ ಶಾಲೆಯ ಕಾಂಪೌಂಡ್ ನಿರ್ಮಿಸಲು ತೊಂದರೆಯಾಗಿದೆ. ಒತ್ತುವರಿಗೆ ಸಂಬಂಧಿಸಿ ತನಿಖೆ ನಡೆಸಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ನಿರ್ಲಕ್ಷ್ಯವಹಿಸಿದರೆ ಹೋರಾಟ ನಡೆಸಲಾಗುವುದೆಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಶ್ರೀನಿವಾಸರೆಡ್ಡಿ, ಗ್ರಾಪಂ ಉಪಾಧ್ಯಕ್ಷ ಮುನಿಯಪ್ಪ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಿಕ್ಕದ್ಯಾವಪ್ಪ, ಸದಸ್ಯರಾದ ರಾಮರೆಡ್ಡಿ, ಅಮ್ಮಾಜೀ, ಬಾಬಾಜಾನ್, ಸುಭ್ರಮಣಿ, ಶ್ರೀನಿವಾಸರೆಡ್ಡಿ, ಮುನಿಕೃಷ್ಣಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement