ಸ್ವಂತ ಕಟ್ಟಡ ನಿರ್ಮಾಣಕ್ಕೆ ಮನವಿ
ಮುಳಬಾಗಲು: ಕನ್ನಡ ಸಾಹಿತ್ಯ ಪರಿಷತ್ಗೆ ಸ್ವಂತ ನಿವೇಶನ ಪಡೆದು ಕಟ್ಟಡ ನಿರ್ಮಿಸಲು ಶಾಸಕರು, ತಹಸೀಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಭೆಯಲ್ಲಿ ಬುಧವಾರ ತೀರ್ಮಾನಿಸಲಾಯಿತು.
ಪಟ್ಟಣದ ಡಿವಿಜಿ ಬಾಲಕರ ಸರ್ಕಾರಿ ಶಾಲೆಯಲ್ಲಿ ಬುಧವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆ ತಾಲೂಕು ಘಟಕದ ಅಧ್ಯಕ್ಷ ಮು.ಕೃ.ಪದ್ಮನಾಭರಾವ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಾಹಿತ್ಯ ಪರಿಷತ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಪ್ರವಾಸಿ ಮಂದಿರದಲ್ಲಿ ಖಾಲಿ ಇರುವ ಕೊಠಡಿಯನ್ನು ತಾತ್ಕಾಲಿಕವಾಗಿ ಪಡೆಯಲು ಶಾಸಕರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು. ನವೆಂಬರ್ 6ರಂದು ಮನೆಗೊಂದು ಕವಿಗೋಷ್ಠಿ ಕಾರ್ಯಕ್ರಮಕ್ಕೆ ನಿವೃತ್ತ ದೈಹಿಕ ಶಿಕ್ಷಕ ಚಾಂದ್ ಪಾಷ ಅವರ ಮನೆಯಲ್ಲಿ ಚಾಲನೆ ನೀಡಲು ನಿರ್ಧರಿಸಲಾಯಿತು. ಪ್ರತಿ ಹದಿನೈದು ದಿನಕ್ಕೊಮ್ಮೆ ಕನ್ನಡಾಭಿಮಾನಿಯೊಬ್ಬರ ಮನೆಯಲ್ಲಿ ಕಾರ್ಯಕ್ರಮ ಅಯೋಜಿಸಲಾಗುವುದು. ಕನ್ನಡ ಸಾಹಿತ್ಯ ಷರಿಷತ್ ಅಜೀವ ಸದಸ್ಯರಾಗಿದ್ದು ಈಚೆಗೆ ಮೃತರಾದ ರೇಷ್ಮೆ ಚಂದ್ರು ಮತ್ತು ಎನ್. ವೆಂಕಟರವಣಚಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಕನ್ನಡಭಟ ವೆಂಕಟಪ್ಪ, ಯು.ವಿ. ನಾರಾಯಣಾಚಾರ್, ಚಾಂದ್ ಪಾಷ, ಶಂಕರಕೇಸರಿ ಇದ್ದರು