ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನಗರಸಭಾ ಸದಸ್ಯನ ಮನೆಗೆ ಸಚಿವ ಮುನಿಯಪ್ಪ ಭೇಟಿ

Srinivasa Murthy VN
Updated On : 2 Sept 2013, 12:32 pm

ಕ.ಪ್ರ.ವಾರ್ತೆ ಕೆಜಿಎಫ್ ಸೆ.1
ಇಲ್ಲಿನ ಅಶೋಕ್‌ನಗರದ ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಕಾರ್ಯಕ್ರಮಕ್ಕೆ ಮತ್ತು ಪಾರಂಡಹಳ್ಳಿ ರಸ್ತೆಯಲ್ಲಿರುವ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ ನೀಡಿದರು.
ಇದೇ ವೇಳೆ ನಗರಸಭಾ ಸದಸ್ಯ ರಮೇಶ್ ಜೈನ್ ಅವರ ಮನೆಗೆ ಭೇಟಿ ನೀಡಿದ್ದು ನಗರದ ಕೆಲ ರಾಜಕೀಯ ಪಕ್ಷಗಳ ಮುಖಂಡರಿಗೆ ಮತ್ತು ನಗರಸಭೆ ಸದಸ್ಯರಿಗೆ ಅನುಮಾನ ಹಾಗೂ ಗೊಂದಲವುಂಟಾಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ನಗರಸಭೆ ಸದಸ್ಯರು ಉಪಸ್ಥಿತರಿದ್ದರು.
ಕೆಜಿಎಫ್ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ(ಎ) ಮೀಸಲಾತಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಹಾಗೂ ನಗರಸಭಾ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವ ಕುರಿತು ಕೆಲ ದಿನಗಳಿಂದ ಚರ್ಚೆ ನಡೆಸಲಾಗುತ್ತಿದೆ. ಆದರೆ, ಭಾನುವಾರ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಯಾವುದೇ ಮಾಹಿತಿ ಇಲ್ಲದೆ ದಿಢೀರನೆ ನಗರಸಭಾ ಸದಸ್ಯರ ಮನೆಗೆ ಭೇಟಿ ನೀಡಿದ್ದು ಪಕ್ಷೇತರ ಸದಸ್ಯ ಮತ್ತು ಕಾಂಗ್ರೆಸ್ ಬೆಂಬಲಿಗರಾದ ಕೆ.ಸಿ. ಮುರಳಿ ಅವರನ್ನು ಅಧ್ಯಕ್ಷರನ್ನಾಗಿ ಮಾಡುವ ಕುರಿತು ಸಚಿವರೊಂದಿಗೆ ಚರ್ಚಿಸಲಾಗಿದ್ದು, ಅವರು ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ.
ಈ ವೇಳೆ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಡಿ.ಜಯಪಾಲ್, ನಗರಸಭಾ ಸದಸ್ಯರಾದ ಮಾಣಿಕ್ಯಂ, ರಮೇಶ್ ಜೈನ್, ಕೆ.ಸಿ.ಮುರಳಿ, ರೇಲ್ವೆ ಸಲಹಾ ಸಮಿತಿ ಸದಸ್ಯ ಕಿಶೋರ್‌ಕುಮಾರ್, ಪ್ರೇಮ್‌ಚಂದ್ ಜೈನ್, ಮುಖಂಡರಾದ ರಮೇಶ್, ಸಂಪತ್, ರಂಗನಾಥ್, ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ರಾಜ್ ಸೇರಿದಂತೆ ಇತರೇ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement