ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಅನ್ನಭಾಗ್ಯ ಅನುಷ್ಠಾನವಾಗಲಿ'

Rashmi Kasaragodu
Updated On : 3 Sept 2013, 12:58 pm

ಶಿಡ್ಲಘಟ್ಟ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ನಗರಸಭೆ ಸದಸ್ಯ ಎಸ್.ಬಿ.ಬಾಬು ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮಾಜದಲ್ಲಿ ಪ್ರತಿಯೊಬ್ಬ ಬಡವರಿಗೆ ಅಗ್ಗದ ದರದಲ್ಲಿ ಅಕ್ಕಿ ನೀಡುವ ಉದ್ದೇಶದಿಂದ ಸರಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾಗೊಳಿಸುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಶಿಕ್ಷಕರ ಕ್ರೀಡಾಕೂಟ ಸ್ಪರ್ಧೆ
ಶಿಡ್ಲಘಟ್ಟ: ಪಟ್ಟಣದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಿಕ್ಷಕ ಮತ್ತು ಶಿಕ್ಷಕಿಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನೂರು ಮೀಟರ್ ಓಟ, ಗುಂಡು ಎಸೆತ ಮತ್ತು ಬಕೆಟ್ನಲ್ಲಿ ಚೆಂಡು ಆಟಗಳನ್ನು ಶಿಕ್ಷಕರಿಗೆ ಏರ್ಪಡಿಸಿದ್ದರೆ, ಅನ್ಲಕ್ಕಿ ಸ್ಪಾಟ್, ಮ್ಯೂಸಿಕಲ್ ಛೇರ್ ಮತ್ತು ಗುಂಡು ಎಸೆತವನ್ನು ಶಿಕ್ಷಕಿಯರಿಗೆ ಏರ್ಪಡಿಸಲಾಗಿತ್ತು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement