ಗುಂಡಿ ಪದ್ಧತಿ ಗೊಬ್ಬರ ತಯಾರಿಕಾ ಪ್ರಾತ್ಯಕ್ಷಿಕೆ
ಕೋಲಾರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಬೂರು ಗ್ರಾಮದಲ್ಲಿನ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎಸ್ಸಿ ರೇಷ್ಮೆ ಹಾಗೂ ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿ ಕೋಲಾರ ತಾಲೂಕಿನ ಅರಹಳ್ಳಿ ಗ್ರಾಮದಲ್ಲಿ ಮೂರು ತಿಂಗಳಿನಿಂದ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅವುಗಳಲ್ಲಿ ಅಜೋಲ ತಯಾರಿಕೆ ಮತ್ತು ಗುಂಡಿ ಪದ್ಧತಿಯಲ್ಲಿ ಗೊಬ್ಬರ ತಯಾರಿಕೆ ವಿಧಾನಗಳನ್ನು ಪ್ರಾತ್ಯಕ್ಷಿಕೆ ಮೂಲಕ ಇದರ ಮಹತ್ವದ ಬಗ್ಗೆ ತಿಳಿಸಲಾಯಿತು.
ಈ ನಿಟ್ಟಿನಲ್ಲಿ ಗುಂಡಿ ಪದ್ಧತಿಯಲ್ಲಿ ಗೊಬ್ಬರ ತಯಾರಿಕೆ ವಿಧಾನ ಮಹತ್ವ ಅರಿತ ಅನೇಕ ರೈತರು ಈ ಪದ್ಧತಿ ಅಳವಡಿಸಿಕೊಂಡಿದ್ದು, ಲಾಭ ಪಡೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮದ ರೈತರೊಂದಿಗೆ ಕೃಷಿ ಮಹಾವಿದ್ಯಾಲಯದ ಪ್ರೊಫೆಸರ್ ಗೊಲ್ಲೆ ನಾಯಕ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ದಿನೇಶ್, ಗೀತಾ ತಂಡದವರು ಹಲವಾರು ಸುಧಾರಿತ ವಿಧಾನಗಳನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.