ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಖಂಡಿಸಿ ಗೋವುಗಳ ಜತೆ ಬಿಜೆಪಿ ಕಾರ್ಯಕರ್ತರ ಧರಣಿ

Rashmi Kasaragodu
Updated On : 3 Sept 2013, 12:56 pm

ಚಿಕ್ಕಬಳ್ಳಾಪುರ: ಈ ಹಿಂದೆ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ  ತಂದಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆದಿರುವುದರ ಜತೆಗೆ, ದೇವಾಲಯಗಳ ವ್ಯವಸ್ಥಾಪನಾ ಮಂಡಳಿ ಸದಸ್ಯರ ಸಮಿತಿ ರದ್ದುಗೊಳಿಸಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸೋವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಪ್ರವಾಸಿ ಮಂದಿರದಿಂದ ಗೋವುಗಳನ್ನು ಜತೆಗೆ ಕರೆದುಕೊಂಡು ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಭಟನಾಕಾರರು ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕೆಲ ಸಮಯ ರಸ್ತೆ ಸಂಚಾರ ತಡೆದರು.
ಸರ್ಕಾರದ ವಿರುದ್ಧ ಘೋಷಣೆ: ಆ ನಂತರ ಉಪ ವಿಭಾಗಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಮಾಯಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದು ಬಿಜೆಪಿ ಸರ್ಕಾರದ ಆಡಳಿತದಾವಧಿಯಲ್ಲಿ ಜಾರಿಗೆಗೆ ತಂದಂತಹ ಜನಪರ ಯೋಜನೆಗಳನ್ನು ಮುಂದುವರೆಸದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ದು ದ್ವೇಷ ರಾಜಕಾರಣ: ಇದೆ ವೇಳೆ ವಿಧಾನಪರಿಷತ್ ಸದಸ್ಯ ಶಿವಯೋಗಿಸ್ವಾವು ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ದ್ವೇಷ ರಾಜಕಾರಣ ಮಾಡುತ್ತ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಕೇವಲ ಅಲ್ಪಸಂಖ್ಯಾತರ ವೋಟು ಗಳಿಸುವ ದುರುದ್ದೇಶವನ್ನಿಟ್ಟುಕೊಂಡು ಆಡಳಿಟ ನಡೆಸುತ್ತಿದೆ ಎಂದು ಟೀಕಿಸಿದರು.
ಜನಪರ ಕಾರ್ಯಕ್ರಮ ಸ್ಥಗಿತ: ರಾಜ್ಯ ಬಿಜೆಪಿ ಸರ್ಕಾರ ಜನಪರ ಕಾರ್ಯಕ್ರಮ ಜಾರಿಗೆ ತಂದು ಜನರಿಗೆ ತುಂಬಾ ಅನುಕೂಲ ಮಾಡಿಕೊಟ್ಟಿತ್ತು. ಆದರೆ, ಕಾಂಗ್ರೆಸ್ ಸರ್ಕಾರವು ಆ ಕಾರ್ಯಕ್ರಮ ಸ್ಥಗಿತಗೊಳಿಸಿದೆ. ಅಲ್ಲದೇ ಕೇವಲ ಪ್ರಚಾರಕ್ಕಾಗಿ, ಆಡಳಿತ ಲಾಭಕ್ಕಾಗಿ ಜನರಿಗೆ ಮೋಸ ಮಾಡುತ್ತಿದೆ. ಅನ್ನಭಾಗ್ಯ ಯೋಜನೆಯ ಮೂಲಕ ರು. 1 ದರದಲ್ಲಿ ಕೆಜಿ ಅಕ್ಕಿ ನೀಡಲಾಗುತ್ತಿದೆಯಾದರೂ ಸಹ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಗೊಂದಲ ನೀತಿಗಳಿಂದ ಅಕ್ಕಿಯನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಡ ಜನರು ಪಡಿತರ ಪದಾರ್ಥಗಳನ್ನು ಪಡೆದುಕೊಳ್ಳಲು ಪರದಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕರಾಳ ಶಾಸನ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಅನೇಕ ವರ್ಷಗಳಿಂದ ಒತ್ತಾಯಿಸಿಕೊಂಡು ಬರಲಾಗುತ್ತಿದೆ. ಇದಕ್ಕೆ ಪೂರಕವಾಗಿ ಬಿಜೆಪಿ ಸರ್ಕಾರ ಸ್ಪಂದಿಸಿದ್ದು ಇದೀಗ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆದಿದೆ. ಅಲ್ಲದೇ 1964 ರ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಗೋವುಗಳ ಹತ್ಯೆಗೆ ಸುಲಭವಾದ ದಾರಿ ಮಾಡಿಕೊಡುತ್ತಿದೆ. ಈ ಮೂಲಕ ಬಹುಸಂಖ್ಯಾತ ಜನರ ಧಾರ್ರ್ಮಿಕ ಭಾವನೆಗಳಿಗೆ ಪೆಟ್ಟು ಕೊಡುತ್ತಿದೆ. ಇದು ಕರಾಳ ಶಾಸನವಾಗಿದ್ದು ಇದನ್ನು ಕೂಡಲೇ ಹಿಂಪಡೆಯಬೇಕು. ಜತೆಗೆ ದೇವಾಲಯಗಳ ವ್ಯವಸ್ಥಾಪನಾ ಸದಸ್ಯರ ಸಮಿತಿಯನ್ನು ರದ್ದುಗೊಳಿಸಿರುವ ಆದೇಶವನ್ನು ರದ್ದುಪಡಿಸಬೇಕು ಒತ್ತಾಯಿಸಿದರು.
ಎಲ್ಲಾ ಅಲ್ಪಸಂಖ್ಯಾತರ ಓಲೈಕೆಗಾಗಿ: ಕೇವಲ ಅಲ್ಪಸಂಖ್ಯಾತರನ್ನು ಓಲೈಸಿಕೊಳ್ಳಲು ಓಟು ರಾಜಕಾರಣ ಮಾಡುವುದನ್ನು ಬಿಡಬೇಕು. ರಾಜ್ಯದಲ್ಲಿ ಕಾಡುತ್ತಿರುವ ಗಂಭೀರ ಸಮಸ್ಯೆಗಳನ್ನು ಬಗೆಹರಿಸಿ ಜನಪರ ಆಡಳಿತ ನಡೆಸಬೇಕು. ಈ ನಿಟ್ಟಿನಲ್ಲಿ ಇಂದು ಸಾಂಕೇತಿಕವಾಗಿ ಹೋರಾಟ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಉಪ ವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ತಮ್ಮ ವಿವಿಧ ಬೇಡಿಕೆ ಈಡೇರಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.  
ಬಿಜೆಪಿ ಮುಖಂಡರಾದ ಅಗಲಗುರ್ಕಿ ಚಂದ್ರಶೇಖರ್, ಲಕ್ಷ್ಮೀ ನಾರಾಯಣ ಗುಪ್ತ, ಪ್ರೇಮಲೀಲಾ ವೆಂಕಟೇಶ್, ಶ್ರೀನಿವಾಸ್, ಶ್ರೀಕಾಂತ್ ಸೇರಿದಂತೆ  ಮತ್ತಿತರರು ಪ್ರತಿಭಟನೆ ನೇತೃತ್ವವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement