ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜೈವಿಕ ಇಂಧನ ಅರಿವು ಅಗತ್ಯ'

Rashmi Kasaragodu
Updated On : 3 Sept 2013, 12:57 pm

ಗುಡಿಬಂಡೆ: ಆಧುನಿಕತೆ ಬೆಳೆದಂತೆಲ್ಲಾ ದಿನೇ ದಿನೇ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಇಂಧನ ದರ ಕೂಡ ಹೆಚ್ಚಿದ್ದು, ಇದು ಪರಿಸರದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತಿರುವುದರಿಂದ ವಾತವರಣದಲ್ಲಿ ಸಾಕಷ್ಟು ಏರು-ಪೇರು ಉಂಟಾಗಿದೆ. ಈ ನಿಟ್ಟಿನಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಜೈವಿಕ ಇಂಧನ ಕುರಿತು ಅರಿವು ಅಗತ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಸಿ.ರವಿಕುಮಾರ್ ಕಿವಿಮಾತು ಹೇಳಿದ್ದಾರೆ.
ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘ  ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ವಿಶ್ವ ಜೈವಿಕ ಇಂಧನ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಚಿತ್ರಕಲಾ ಸ್ಫರ್ಧೆ ಹಾಗೂ ವಿದ್ಯಾರ್ಥಿಗಳಿಗೆ ಜೈವಿಕ ಇಂಧನ ಕುರಿತು ಅರಿವು  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಜಾಗತಿಕ ತಾಪಮಾನ ದಿನೇ ದಿನೇ ಹೆಚ್ಚುತ್ತಿದ್ದು ಅಗತ್ಯ ಇಂಧನವನ್ನು ಹೊರ ರಾಷ್ಟ್ರಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುತ್ತಿದ್ದು ಇದರಿಂದಾಗಿ ಆರ್ಥಿಕವಾಗಿ ಮತ್ತು ಆರೋಗ್ಯಕರವಾಗಿ ಹಲವಾರು ಸಮಸ್ಯೆಗಳು ಉಂಟಾಗಿವೆ. ಪರಿಸರಸ್ನೇಹಿ ಇಂಧನಗಳಾದ ಸೌರವಿದ್ಯುತ್, ಪವನ ವಿದ್ಯುತ್, ಹೊಂಗೆ ಎಣ್ಣೆ ಮೊದಲಾದವುಗಳನ್ನು ಬಳಸುವುದರ ಮೂಲಕ ಪರಿಸರ ಸಂರಕ್ಷಿಸುವ ಜವಾಬ್ದಾರಿ ಎಲ್ಲರದ್ದಾಗಿದೆ ಎಂದು ಇದೆ ವೇಳೆ ನುಡಿದರು.
ಮುಖ್ಯ ಶಿಕ್ಷಕಿ ಎಸ್.ಪದ್ಮಾ ಮಾತನಾಡಿ,  ಪರಿಸರದ ಬಗ್ಗೆ ಸುಂದರ ಚಿತ್ರಗಳನ್ನು ಬಿಡಿಸಿದ್ದು, ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವ ಮೂಲಕ ಅವರಲ್ಲಿ ಪರಿಸರ ಜಾಗೃತಿ ಮೂಡಿಸಲು ಮುಂದಾದ ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘದ ಪ್ರಯತ್ನ ಉತ್ತಮವಾದುದು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮ ಪ್ರಯುಕ್ತ ಜೈವಿಕ ಇಂಧನ ಮಹತ್ವ, ಪರಿಸರ ಸಂರಕ್ಷಣೆ ಮೊದಲಾದ ವಿಚಾರಗಳ ಕುರಿತಾಗಿ ಚಿತ್ರಕಲಾ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಆಯೋಜಿಸಿದ್ದು, ಇದರಲ್ಲಿ ಸರ್ಕಾರಿ ಬಾಲಕರ ಶಾಲೆಯ 6ನೇ ತರಗತಿ ಶಿವಕುಮಾರ್, 7ನೇ ತರಗತಿ ರವಿಚಂದ್ರ, ವಿನೋದ್ ಬಹುಮಾನ ಪಡೆದರು.
ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘದ ಅಧ್ಯಕ್ಷ ವಕೀಲ ಜಿ.ವಿ.ವಿಶ್ವನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಶ್ವತ್ಥಪ್ಪ, ಸಿಆರ್ಪಿ ರಾಮನಾಥ್, ಶಿಕ್ಷಕರಾದ ಮೀರಾ, ಸುಕನ್ಯಾ, ಸುಬ್ಬಲಕ್ಷ್ಮೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement