ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶಿಕ್ಷಕರ ದಿನಾಚರಣೆ

Rashmi Kasaragodu
Updated On : 3 Sept 2013, 12:56 pm

ಚಿಕ್ಕಬಳ್ಳಾಪುರ: ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸೆ.5 ರಂದು ಬೆಳಿಗ್ಗೆ ಬೆಳಗ್ಗೆ 10.30 ಕ್ಕೆ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಯುತ್ತಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು  ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸುವರು. ಶಾಸಕ ಡಾ.ಕೆ.ಸುಧಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ.  ಕೇಂದ್ರ ಸಚಿವರಾದ ಡಾ.ಎಂ.ವೀರಪ್ಪಮೊಯ್ಲಿ,  ಕೆ.ಹೆಚ್.ಮುನಿಯಪ್ಪ, ಶಾಸಕರಾದ ಎಂ.ರಾಜಣ್ಣ, ಎಸ್.ಎನ್.ಸುಬ್ಬಾರೆಡ್ಡಿ, ಎಂ.ಕೃಷ್ಣಾರೆಡ್ಡಿ, ವಿಧಾನಪರಿಷತ್ ಮುಖ್ಯ ಸಚೇತಕ ಡಾ.ಎ.ಹೆಚ್.ಶಿವಯೋಗಿಸ್ವಾವು, ವಿಧಾನಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ನಸೀರ್ ಅಹಮದ್, ಡಿ.ಎಸ್.ವೀರಯ್ಯ, ಜಿಪಂ ಅಧ್ಯಕ್ಷ ಎಸ್.ಎನ್.ಚಿನ್ನಪ್ಪ ಜಿಲ್ಲಾಧಿಕಾರಿ  ಡಾ.ಆರ್.ವಿಶಾಲ್, ಜಿಪಂ ಸಿಇಒ ನೀಲಾ ಮಂಜುನಾಥ್ ಮತ್ತಿತರರು ಭಾಗವಹಿಸಲಿದ್ದಾರೆ.   ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಸೆ.5 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ರಕ್ತದಾನ ಶಿಬಿರದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ದೊಡ್ಡರಂಗೇಗೌಡ ದಂಪತಿ ಕೈವಾರಕ್ಕೆ ಭೇಟಿ


ಚಿಂತಾಮಣಿ: ವಿಧಾನ ಪರಿಷತ್ತಿನ ಸದಸ್ಯ, ಖ್ಯಾತ ಸಾಹಿತಿ ಡಾ. ದೊಡ್ಡರಂಗೇಗೌಡ ಅವರು ಕುಟುಂಬ ಸಮೇತರಾಗಿ ತಾಲೂಕಿನ ಶ್ರೀಕ್ಷೇತ್ರ ಕೈವಾರಕ್ಕೆ ಭೇಟಿ ನೀಡಿದರು. ಕೈವಾರದ ಅಮರನಾರಾಯಣಸ್ವಾಮಿ ದೇವಾಲಯ, ಸದ್ಗುರು ತಾತಯ್ಯನವರ ಸಾನ್ನಿಧ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಾ. ದೊಡ್ಡರಂಗೇಗೌಡ ಮಾತನಾಡಿ, 1984ರಲ್ಲಿ ಕೈವಾರದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪುಗಳನ್ನು ಸ್ಮರಿಸಿದರು. ಇಂತಹ ಸಣ್ಣ ಗ್ರಾಮ ಆಧ್ಯಾತ್ಮಿಕ ವಲಯದಲ್ಲಿ ಬಹಳಷ್ಟು ಅಭಿವೃದ್ಧಿ ಸಾಧಿಸಿದೆ. ಇದಕ್ಕೆ ದಿವಂಗತ ಎಂ.ಎಸ್. ರಾಮಯ್ಯನವರ ಕೊಡುಗೆ ಅಪಾರ ಎಂದರು. ಡಾ. ಜಯರಾಮು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯುತ್ತಿದ್ದಾರೆ ಎಂದರು. ಯೋಗಿ ನಾರಾಯಣ ಮಠದ ಆಡಳಿತಾಧಿಕಾರಿ ಲಕ್ಷ್ಮೀನಾರಾಯಣ ಉಪಸ್ಥಿತರಿದ್ದು, ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement