ಸಂಸ್ಕೃತಿಯಲ್ಲಿ ರಕ್ಷಾ ಬಂಧನಕ್ಕೆ ವಿಶೇಷ ಮಹತ್ವ: ಮುನಿಯಪ್ಪ
ಶಿಡ್ಲಘಟ್ಟ: ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನಕ್ಕೆ ವಿಶೇಷ ಮಹತ್ವಯಿದ್ದು, ಪವಿತ್ರ ಬಂಧನದ ಪ್ರತೀಕವಾಗಿರುವ ರಕ್ಷಾ ಬಂಧನದಿಂದ ಸಹೋದರ-ಸಹೋದರಿಯರ ನಡುವೆ ಪ್ರೀತಿ ಹೆಚ್ಚಾಗುತ್ತದೆ ಎಂದು ಮಾಜಿ ಸಚಿವ ವಿ. ಮುನಿಯಪ್ಪ ಹೇಳಿದರು. ಪಟ್ಟಣದ ಸಾರ್ವಜನಿಕ ಗ್ರಂಥಾಲಯದ ರಸ್ತೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಶಾಖೆಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದಲ್ಲಿ ಎಲ್ಲಾ ವರ್ಗಗಳ ಜನರು ಸೌಹಾರ್ದತೆಯಿಂದ ಬಾಳುವ ಮೂಲಕ ದೇಶವನ್ನು ಅಭಿವೃಧ್ಧಿ ಪಥದತ್ತ ಕೊಂಡ್ಯೊಯಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸಂಚಾಲಕಿ ಸುಜಾತಕ್ಕ, ಸ್ಥಳೀಯ ಶಾಖೆಯ ಬಿ.ಕೆ. ಗೀತಕ್ಕ, ಸುಮಕ್ಕ, ಬಿ.ಕೆ. ದೇವಿಕಾ, ಬಿ.ಕೆ. ರಾಮಲಕ್ಷ್ಮೀ ಮತ್ತಿತರರು ಹಾಜರಿದ್ದರು.